ನವದೆಹಲಿ: ‘ಧನಬಾದ್ ನ್ಯಾಯಾಧೀಶರ ಹತ್ಯೆ ಬಗ್ಗೆ ಸಿಬಿಐ ತನಿಖೆಯಲ್ಲಿನ ಪ್ರಗತಿ ಬಗ್ಗೆ ಜಾರ್ಖಂಡ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅವರು ವಾರಕ್ಕೊಮ್ಮೆ ಮೇಲ್ವಿಚಾರಣೆ ನಡೆಸಲಿದ್ದಾರೆ’ ಎಂದು ಸುಪ್ರೀಂಕೋರ್ಟ್ ಸೋಮವಾರ ಹೇಳಿದೆ.

‘ಈ ಪ್ರಕರಣ ಸಂಬಂಧ ಹೈಕೋರ್ಟ್‌ಗೆ ಪ್ರತಿ ವಾರ ವರದಿಯನ್ನು ಸಲ್ಲಿಸಬೇಕು. ಅದನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠವು ಮೇಲ್ವಿಚಾರಣೆ ನಡೆಸಲಿದೆ’ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಮತ್ತು ನ್ಯಾಯಮೂರ್ತಿಗಳಾದ ವಿನೀತ್ ಶರಣ್, ಸೂರ್ಯಕಾಂತ್ ಅವರನ್ನೊಳಗೊಂಡ ಪೀಠವು ಸಿಬಿಐಗೆ ಸೂಚಿಸಿದೆ.

ಧನಬಾದ್ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಅವರು ಜುಲೈ 28ರಂದು ಜಡ್ಜಸ್ ಕಾಲೊನಿ ಬಳಿ ವಾಯುವಿಹಾರಕ್ಕೆ ತೆರಳಿದ್ದಾಗ ವಾಹನ ಗುದ್ದಿಸಿ ಅವರನ್ನು ಹತ್ಯೆ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.