ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ರಾಂಚಿಯಲ್ಲಿ ಮಂಗಳವಾರ ಸಚಿವಾಲಯ ಘೇರಾವ್ ಕಾರ್ಯಕ್ರಮ ಹಮ್ಮಿಕೊಂಡಿದ್ದರಿಂದಾಗಿ ಈ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಅದನ್ನು ಲೆಕ್ಕಿಸದೇ ಸಚಿವಾಲಯಕ್ಕೆ ನುಗ್ಗಲು ಕಾರ್ಯಕರ್ತರು ಯತ್ನಿಸಿದ್ದರು. ಪ್ರತಿಭಟನಕಾರರನ್ನು ಚದುರಿಸಲು ಅಶ್ರುವಾಯು, ಜಲಫಿರಂಗಿ ಹಾಗೂ ಲಾಠಿ ಚಾರ್ಜ್ ಪ್ರಯೋಗಿಸಲಾಗಿತ್ತು.