ಗಿರಿಡೀಹ್: ಆಭರಣ ಕಳ್ಳತನದ ಆರೋಪದಲ್ಲಿ ಮಧ್ಯವಯಸ್ಕ ಮಹಿಳೆ ಮೇಲೆ ಹಲ್ಲೆ ನಡೆಸಿ, ಅವರ ತಲೆಕೂದಲು ಕತ್ತರಿಸಿ, ಚಪ್ಪಲಿ ಹಾರ ಹಾಕಿ ಗ್ರಾಮದಲ್ಲಿ ಮೆರವಣಿಗೆ ಮಾಡಿರುವ ಘಟನೆ ಜಾರ್ಖಂಡ್ನ ಗಿರಿಡೀಹ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಮಂಗಳವಾರ ಹೇಳಿದ್ದಾರೆ.

ಘಟನೆಯು ಭಾನುವಾರ ಸಂಜೆ ಪಿಪರಾಡೀಹ್ ಗ್ರಾಮದ ದುಮ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಮುಖ ಆರೋಪಿ ನಾಗೇಶ್ವರ ಯಾದವ್ ಮತ್ತು ಅವರ ಕುಟುಂಬದ ಸದಸ್ಯರು, ಮಹಿಳೆಯು ಆಭರಣ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ, ಕೃತ್ಯ ಎಸಗಿದ್ದಾರೆ.

‘ಘಟನೆಯ ವಿಡಿಯೊ ಸೋಮವಾರ ಹರಿದಾಡಿದ್ದು, ಇದನ್ನು ಗಮನಿಸಿ ಸಂಜೆ ವೇಳೆ ಸಂತ್ರಸ್ತೆಯನ್ನು ಸಂಪರ್ಕಿಸಿದ್ದೇವೆ. ಆರು ಮಹಿಳೆಯರು ಸೇರಿದಂತೆ ಎಂಟು ಜನರ ಮೇಲೆ ಪ್ರಕರಣ ದಾಖಲಿಸಿದ್ದೇವೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಹಲ್ಲೆಗೊಳಗಾದ ಮಹಿಳೆಯನ್ನು ದುಮ್ರಿಯ ರೆಫರಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.