ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2016ರ ಪ್ರಕರಣ; ಜಿಗ್ನೇಶ್‌ ಮೇವಾನಿ ಖುಲಾಸೆ

Published 28 ನವೆಂಬರ್ 2023, 15:28 IST
Last Updated 28 ನವೆಂಬರ್ 2023, 15:28 IST
ಅಕ್ಷರ ಗಾತ್ರ

ಅಹಮದಾಬಾದ್‌: ಕಾನೂನುಬಾಹಿರವಾಗಿ ಗುಂಪು ಸೇರಿಸಿದ್ದ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ, ದಲಿತ ನಾಯಕ ಜಿಗ್ನೇಶ್‌ ಮೇವಾನಿ ಮತ್ತು ಇತರ ಆರು ಮಂದಿ ಹೋರಾಟಗಾರರನ್ನು ಇಲ್ಲಿಯ ಮೆಟ್ರೊಪಾಲಿಟನ್‌ ನ್ಯಾಯಾಲಯವು ಮಂಗಳವಾರ ಖುಲಾಸೆಗೊಳಿಸಿದೆ. 

ನೈರ್ಮಲ್ಯ ಕಾರ್ಯಕರ್ತರ ಹಕ್ಕುಗಳನ್ನು ಆಗ್ರಹಿಸಿ 2016ರಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಮೇವಾನಿ ಅವರೂ ಅದರಲ್ಲಿ ಭಾಗಿಯಾಗಿದ್ದರು. ಪ್ರತಿಭಟನೆಗೆ ಪೂರ್ವಾನುಮತಿ ‍ಪಡೆದಿರಲಿಲ್ಲ ಮತ್ತು ಪ್ರತಿಭಟನೆ ವೇಳೆ ಸಾರ್ವಜನಿಕ ಸ್ವತ್ತುಗಳಿಗೆ ಹಾನಿ ಮಾಡಲಾಗಿತ್ತು ಎಂಬ ಆರೋಪದ ಮೇರೆಗೆ ಪ್ರತಿಭಟನಕಾರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. 

ಆರೋಪ ಸಾಬೀತುಪಡಿಸಲು ಸರ್ಕಾರ ಪರ ವಕೀಲರಿಗೆ ಸಾಧ್ಯವಾಗಿಲ್ಲ ಎಂದು ಹೇಳಿರುವ ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿದೆ.    

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT