ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೈದರಾಬಾದ್‌ | ಪ್ರೀತಿ ನಿರಾಕರಣೆ: ಬೀದರ್‌ನ ಯುವಕನಿಂದ ಯುವತಿ ಹತ್ಯೆ

Published : 29 ಆಗಸ್ಟ್ 2024, 13:19 IST
Last Updated : 29 ಆಗಸ್ಟ್ 2024, 13:19 IST
ಫಾಲೋ ಮಾಡಿ
Comments

ಹೈದರಾಬಾದ್: ತನ್ನಿಂದ ದೂರವಾಗಲು ಪ್ರಯತ್ನಿಸುತ್ತಿದ್ದ ಪಶ್ಚಿಮ ಬಂಗಾಳದ 26 ವರ್ಷದ ಯುವತಿಯನ್ನು ಬೀದರ್‌ನ ಯುವಕನೊಬ್ಬ ಚಾಕುವಿನಿಂದ ಇರಿದು  ಕೊಲೆ ಮಾಡಿ, ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಬುಧವಾರ ತಡರಾತ್ರಿ ಯುವತಿಯ ಕೋಣೆಗೆ ಹೋಗಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಮತ್ತು ಆಕೆಯನ್ನು ರಕ್ಷಿಸಲು ಮುಂದಾದ ಮೂವರು ಯುವತಿಯರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ ಮಹಿಳೆ ಮತ್ತು ಇತರ ಮೂವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾದರು. ಆದರೆ, ಅಷ್ಟರಲ್ಲೇ ಯುವತಿ ಮೃತಪಟ್ಟಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಹಿಂದೆ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಮತ್ತು ಬ್ಯೂಟಿಷಿಯನ್ ಆಗಿದ್ದ ಯುವತಿ ಒಬ್ಬರಿಗೊಬ್ಬರು ಪರಿಚಿತರು ಮತ್ತು ಸಂಬಂಧ ಹೊಂದಿದ್ದರು ಎಂದು ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಪೊಲೀಸರು ತಿಳಿಸಿದ್ದಾರೆ.

ನಂತರ ಮಹಿಳೆಯು ಹೈದರಾಬಾದ್‌ಗೆ ತೆರಳಿದ್ದು, ಕಳೆದ ಒಂದು ತಿಂಗಳಿನಿಂದ ಅವಳು ಆರೋಪಿಯಿಂದ ದೂರವಾಗಲು ಪ್ರಯತ್ನಿಸಿ, ಮತ್ತೊಬ್ಬ ಯುವಕನೊಂದಿಗೆ ಸಲುಗೆಯಿಂದ ಇದ್ದಳು ಎಂದು ಶಂಕಿಸಲಾಗಿದೆ. ಇದೇ ಕಾರಣಕ್ಕೆ ಹಲ್ಲೆ ನಡೆದಿದೆ ಎಂದು ಅವರು ಹೇಳಿದ್ದಾರೆ. 

ವಿವಾಹಿತ ಮಹಿಳೆ ವೈಯಕ್ತಿಕ ಕಾರಣಗಳಿಂದ ಪತಿಯಿಂದ ದೂರ ಉಳಿದಿದ್ದಳು. ಹಲ್ಲೆ ನಡೆಸಿ ಪರಾರಿಯಾದ ಆರೋಪಿ, ಗುರುವಾರ ಮುಂಜಾನೆ ಮೊಯಿನಾಬಾದ್ ಬಳಿ ವಿದ್ಯುತ್ ಕಂಬವನ್ನು ಹತ್ತಿ ಹೈ–ಟೆನ್ಷನ್ ತಂತಿಯನ್ನು ಸ್ಪರ್ಶಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಟ್ಟಗಾಯಗಳಿಂದ ಬಳಲುತ್ತಿದ್ದ ಆರೋಪಿಯನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕೊಲೆ ಮತ್ತು ಕೊಲೆ ಯತ್ನದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT