ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಯೋದಿಂದ ‘ಭಾರತ್‌ ಜಿಪಿಟಿ’ ಅಭಿವೃದ್ಧಿ 

Published 27 ಡಿಸೆಂಬರ್ 2023, 16:16 IST
Last Updated 27 ಡಿಸೆಂಬರ್ 2023, 16:16 IST
ಅಕ್ಷರ ಗಾತ್ರ

ಮುಂಬೈ: ‘ಭಾರತ್‌ ಜಿಪಿಟಿ’ ಅಭಿವೃದ್ಧಿ ಸಂಬಂಧ ಐಐಟಿ–ಬಾಂಬೆ ಜೊತೆಗೆ ರಿಲಯನ್ಸ್‌ ಜಿಯೋ ಸಂಸ್ಥೆಯು ಜೊತೆಯಾಗಿ ಕೆಲಸ ನಿರ್ವಹಿಸಲಿದೆ ಎಂದು ರಿಲಯನ್ಸ್‌ ಜಿಯೋ ಇನ್ಫೋಕಾಮ್ ಮುಖ್ಯಸ್ಥ ಆಕಾಶ್ ಅಂಬಾನಿ ಹೇಳಿದ್ದಾರೆ.

ಐಐಟಿ–ಬಾಂಬೆಯಲ್ಲಿ ಬುಧವಾರ ನಡೆದ ಟೆಕ್‌ಫೆಸ್ಟ್‌ನಲ್ಲಿ ಮಾತನಾಡಿದ ಅವರು, ‘ಭಾರತ್ ಜಿಪಿಟಿ’ ಅಭಿವೃದ್ಧಿಗಾಗಿ ಐಐಟಿ ಜೊತೆ ಕೈಜೋಡಿಸಲು ನಿರ್ಧರಿಸಲಾಗಿದೆ ಎಂದರು.

ಅಲ್ಲದೇ, ಜಿಯೋ ಇನ್ಫೋಕಾಮ್‌ನಿಂದ ಟಿ.ವಿಗಾಗಿ ಆಪರೇಟಿವ್ ಸಿಸ್ಟಂ ಅಭಿವೃದ್ಧಿಪಡಿಸುವುದಕ್ಕೂ ಚಿಂತಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ಕೆಲಸ ನಿರ್ವಹಿಸಲಾಗುತ್ತಿದೆ ಎಂದು ತಿಳಿಸಿದರು.

ಪ್ರಸ್ತುತ ಎಲ್ಲಾ ಕ್ಷೇತ್ರಗಳಲ್ಲೂ ಕೃತಕ ಬುದ್ಧಿಮತ್ತೆಯು ಪರಿವರ್ತನೆ ತರುತ್ತಿದೆ. ಇದಕ್ಕೆ ಸಂಬಂಧಿಸಿದ ಅಪ್ಲಿಕೇಷನ್‌ಗಳ ಅಭಿವೃದ್ಧಿಗೆ ಕಂಪನಿ ಮುಂದಾಗಿದೆ ಎಂದು ತಿಳಿಸಿದರು.

ಕಂಪನಿಯ ಅಭಿವೃದ್ಧಿಗೆ ಪೂರಕವಾದ ಪರಿಸರ ವ್ಯವಸ್ಥೆ ರೂಪಿಸುವುದು ಅತಿಮುಖ್ಯ. ಈ ನಿಟ್ಟಿನಲ್ಲಿ ‘ಜಿಯೋ 2.0’ ದೃಷ್ಟಿಯಲ್ಲಿ ಇಟ್ಟುಕೊಂಡು ಈಗಾಗಲೇ ಕೆಲಸ ಆರಂಭಿಸಲಾಗಿದೆ ಎಂದು ಹೇಳಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT