ಅಲ್ಲಲ್ಲಿ ಸಣ್ಣಪುಟ ಗಲಾಟೆಗಳನ್ನು ಹೊರತುಪಡಿಸಿದರೆ ಮತದಾನ ಬಹುತೇಕ ಶಾಂತಿಯುತವಾಗಿ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಭದ್ರತೆಯ ದೃಷ್ಟಿಯಿಂದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಚೆಕ್‌ಪೋಸ್ಟ್ ಗಳನ್ನು ಸ್ಥಾಪಿಸಿ ವಾಹನಗಳ ಮೇಲೆ ಕಣ್ಗಾವಲಿಡಲಾಗಿದೆ.
ಪಿಡಿಪಿಯ ಮಾಜಿ ಸಚಿವರಾದ ಆಸಿಯಾ ನಕಾಶ್, ಗುಲಾಂ ನಬಿ ಹಂಜೂರಾ, ಜೈಲಿನಲ್ಲಿರುವ ಪ್ರತ್ಯೇಕ ತಾವಾದಿ ನಾಯಕ ಸರ್ಜನ್ ಅಹ್ಮದ್ ವಾಗೇ, ಅಪ್ನಿ ಪಕ್ಷದ ಅಧ್ಯಕ್ಷ ಅಲ್ತಾಫ್ ಬುಖಾರಿ, ಮಾಜಿ ಸಚಿವರಾದ ಅಲಿ ಮೊಹಮ್ಮದ್ ಸಾಗರ್ ಸಹ ಚುನಾವಣಾ ಅಖಾಡದಲ್ಲಿರುವ ಪ್ರಮುಖ ಅಭ್ಯರ್ಥಿಗಳು.
ಆರು ಜಿಲ್ಲೆಗಳ 25.78 ಲಕ್ಷ ಮತದಾರರು ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಮಾಜಿ ಸ್ಪೀಕರ್ ಮುಬಾರಕ್ ಗುಲ್, ಜಮ್ಮು–ಕಾಶ್ಮೀರ ಕಾಂಗ್ರೆಸ್ ಘಟಕದ ಅಧ್ಯಕ್ಷ ತಾರಿಕ್ ಹಮೀದ್ ಕರ್ರಾ ಸೇರಿದಂತೆ 239 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.