ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಮತ್ತು ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಪಾತಕಿ ಹತ್ಯೆ

Published 3 ಏಪ್ರಿಲ್ 2024, 13:15 IST
Last Updated 3 ಏಪ್ರಿಲ್ 2024, 13:15 IST
ಅಕ್ಷರ ಗಾತ್ರ

ಜಮ್ಮು: ‘ಜಮ್ಮು ಮತ್ತು ಕಾಶ್ಮೀರದ ಕಠುವಾದ ಬಳಿ ಇರುವ ಸರ್ಕಾರಿ ವೈದ್ಯಕೀಯ ಕಾಲೇಜಿನ ಸಮೀಪ ನಡೆದ ಎನ್‌ಕೌಂಟರ್‌ನಲ್ಲಿ ಪಾತಿಕಿಯೊಬ್ಬನನ್ನು ಪೊಲೀಸರು ಹತ್ಯೆ ಮಾಡಿದ್ದಾರೆ’ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

‘ವಾಸುದೇವ್‌ ಮೃತ ಪಾತಕಿ. ಈತ ರಾಮಗಢ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಕಾಗಿದ್ದ ವ್ಯಕ್ತಿಯಾಗಿದ್ದ. ಖಚಿತ ಮಾಹಿತಿ ಮೇರೆಗೆ ಈತನನ್ನು ಬಂಧಿಸಲು ಪ್ರಯತ್ನಿಸಿದಾಗ ಗುಂಡಿನ ಚಕಮಕಿ ನಡೆಯಿತು’ ಎಂದು ಹೇಳಿದ್ದಾರೆ.

‘ಎನ್‌ಕೌಂಟರ್‌ ಸಂದರ್ಭದಲ್ಲಿ ತಲೆಗೆ ಗಾಯವಾಗಿದ್ದ ಎಸ್‌ಐ ದೀಪಕ್‌ ಶರ್ಮಾ ಎಂಬುವವರು ಆಸ್ಪತ್ತೆಯಲ್ಲಿ ಚಿಕಿತ್ಸೆ ಪಡೆಯುವಾಗ ಮೃತಪಟ್ಟಿದ್ದಾರೆ. ಮತ್ತೊಬ್ಬ ವಿಶೇಷ ಪೊಲೀಸ್‌ ಅಧಿಕಾರಿ ಅನಿಲ್‌ ಕುಮಾರ್‌ ಎಂಬುವವರೂ ಗಾಯಗೊಂಡಿದ್ದಾರೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

‘ವಾಸುದೇವ್‌, ಕುಖ್ಯಾತ ಶುನೂ ಗುಂಪಿನ ನಾಯಕ. ಗುಂಡಿನ ಚಕಮಕಿ ವೇಳೆ ಈತನ ಸಹಚರನೊಬ್ಬ ಗಾಯಗೊಂಡಿದ್ದಾನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT