ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗ್ರರಿಗೆ ನೆರವು ಪ್ರಕರಣ: ಸೇವೆಯಿಂದ ಅಧಿಕಾರಿ ವಜಾ

Last Updated 20 ಮೇ 2021, 16:34 IST
ಅಕ್ಷರ ಗಾತ್ರ

ಜಮ್ಮು: ಭಯೋತ್ಪಾದನೆ ನೆರವು ಪ್ರಕರಣ ಸಂಬಂಧ ಎನ್‌ಐಎ ಬಂಧಿಸಿ, ಆರೋಪಪಟ್ಟಿಯನ್ನು ದಾಖಲಿಸಿದ್ದ ಪೊಲೀಸ್‌ ಅಧಿಕಾರಿ ದೇವಿಂದರ್ ಸಿಂಗ್ ಅವರನ್ನು ಜಮ್ಮು ಮತ್ತು ಕಾಶ್ಮೀರ ಆಡಳಿತ ಗುರುವಾರ ಸೇವೆಯಿಂದ ವಜಾ ಮಾಡಿದೆ.

ಸಿಂಗ್ ಅವರನ್ನು ನಿಷೇಧಿತ ಹಿಜ್‌ಬುಲ್‌ ಮುಜಾಹಿದ್ದೀನ್‌ನ ಉಗ್ರರು ಕಾಶ್ಮೀರದಿಂದ ಜಮ್ಮುವಿಗೆ ಬರಲು ನೆರವಾಗಿದ್ದರು ಎಂಬುದಕ್ಕೆ ಸಂಬಂಧಿಸಿ ಕಳೆದ ವರ್ಷದ ಜನವರಿಯಲ್ಲಿ ಬಂಧಿಸಲಾಗಿತ್ತು. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಕರಣ ತನಿಖೆ ಕೈಗೊಂಡಿತ್ತು.

ತಕ್ಷಣದಿಂದ ಜಾರಿಗೆ ಬರುವಂತೆ ಸಂವಿಧಾನದ ವಿಧಿ 311ರ ಅನುಸಾರ ಸೇವೆಯಿಂದ ವಜಾ ಮಾಡಲಾಗಿದೆ ಎಂದು ಲೆಫ್ಟಿನಂಟ್‌ ಗವರ್ನರ್ ಮನೋಜ್‌ ಸಿನ್ಹಾ ತಿಳಿಸಿದ್ದಾರೆ. ಇದರ ಆಧಾರದಲ್ಲಿ ಜಮ್ಮುವಿನ ಸಾಮಾನ್ಯ ಆಡಳಿತ ವಿಭಾಗವು ವಜಾ ಆದೇಶವನ್ನು ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT