ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್‌ನಲ್ಲಿ ‘ಜೆಎಂಎಂ’ ಮೈತ್ರಿಕೂಟ ಬಲವಾಗಿದೆ: ಸಿಎಂ ಚಂಪೈ ಸೊರೇನ್

Published 18 ಫೆಬ್ರುವರಿ 2024, 11:21 IST
Last Updated 18 ಫೆಬ್ರುವರಿ 2024, 11:21 IST
ಅಕ್ಷರ ಗಾತ್ರ

ನವದೆಹಲಿ: ಜಾರ್ಖಂಡ್‌ನಲ್ಲಿ ಜೆಎಂಎಂ ನೇತೃತ್ವದ ಮೈತ್ರಿಕೂಟವು ಬಲವಾಗಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಆಡಳಿತ ನಡೆಸಲು ಯಾವುದೇ ರೀತಿಯ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಚಂಪೈ ಸೊರೇನ್ ಭಾನುವಾರ ಹೇಳಿದ್ದಾರೆ.

ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಖರ್ಗೆ ಅವರನ್ನು ಸೌಜನ್ಯಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ ಎಂದರು.

ಇತ್ತೀಚಿನ ಸಂಪುಟ ರಚನೆ ಬಗ್ಗೆ ಕಾಂಗ್ರೆಸ್‌ ಶಾಸಕರು ಅಸಮಾಧಾನಗೊಂಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಚಂಪೈ, ಇದು ಕಾಂಗ್ರೆಸ್‌ನ ಆಂತರಿಕ ವಿಷಯವಾಗಿದೆ. ಹಾಗಾಗಿ ಪಕ್ಷದಲ್ಲಿಯೇ ಬಗೆಹರಿಸಿಕೊಳ್ಳುತ್ತಾರೆ. ಜೆಎಂಎಂ ಮತ್ತು ಕಾಂಗ್ರೆಸ್‌ ಮೈತ್ರಿಯ ನಡುವೆ ಯಾವುದೇ ಸಮಸ್ಯೆಯಿಲ್ಲ ಎಂದು ಹೇಳಿದ್ದಾರೆ.

ಸಚಿವ ಸ್ಥಾನ ಬದಲಾವಣೆ ಮಾಡುವಂತೆ ಪಟ್ಟು ಹಿಡಿದಿರುವ ಕಾಂಗ್ರೆಸ್‌ನ 12 ಶಾಸಕರು, ಫೆಬ್ರುವರಿ 23ರಿಂದ ಆರಂಭವಾಗುವ ರಾಜ್ಯ ವಿಧಾನಸಭೆ ಅಧಿವೇಶನವನ್ನು ಬಹಿಷ್ಕರಿಸುವುದಾಗಿ ತಿಳಿಸಿದ್ದಾರೆ.

ಜಾರ್ಖಂಡ್‌ ರಾಜ್ಯವು ಒಟ್ಟು 81 ವಿಧಾನಸಭಾ ಕ್ಷೇತ್ರ ಹೊಂದಿದೆ. ಇದೀಗ 47 ಶಾಸಕರೊಂದಿಗೆ ಜೆಎಂಎಂ ಮೈತ್ರಿಕೂಟ (ಜೆಎಂಎಂ-29, ಕಾಂಗ್ರೆಸ್-17 ಮತ್ತು 1 ಆರ್‌ಜೆಡಿ) ಸರ್ಕಾರ ರಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT