ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19: ದೇಶದಲ್ಲಿ 412 ಪ್ರಕರಣ ದೃಢ; ಜೆಎನ್.1 ಸೋಂಕಿತರ ಸಂಖ್ಯೆ 69ಕ್ಕೆ ಏರಿಕೆ

Published 26 ಡಿಸೆಂಬರ್ 2023, 10:17 IST
Last Updated 26 ಡಿಸೆಂಬರ್ 2023, 10:17 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಮಂಗಳವಾರ ಹೊಸದಾಗಿ 412 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ  4,170ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ದೇಶದಲ್ಲಿ ಪತ್ತೆಯಾದ ಒಟ್ಟು ಪ್ರಕರಣಗಳ ಸಂಖ್ಯೆ 4.50 ಕೋಟಿಯಾಗಿದ್ದು, 4.44 ಕೋಟಿ ಜನರು ಚೇತರಿಸಿಕೊಂಡಿದ್ದಾರೆ. ಚೇತರಿಕೆ ಪ್ರಮಾಣ ಶೇ 98.81ರಷ್ಟಿದೆ. ಒಟ್ಟು 5,33,337 ಮಂದಿ ಸಾಂಕ್ರಾಮಿಕದಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದೆ.

ಈವರೆಗೆ ದೇಶದಾದ್ಯಂತ 220.76 ಕೋಟಿ ಡೋಸ್‌ ಕೋವಿಡ್‌ ಲಸಿಕೆ ನೀಡಲಾಗಿದೆ.

ಜೆಎನ್‌.1 ಸೋಂಕಿತರ ಸಂಖ್ಯೆ 69ಕ್ಕೆ ಏರಿಕೆ: ಮತ್ತೆ ಆರು ಜನರಲ್ಲಿ ಕೋವಿಡ್‌ ವೈರಾಣುವಿನ ಹೊಸ ಉಪ ತಳಿ ಜೆಎನ್‌.1 ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ  ಜೆಎನ್‌.1 ಸೋಂಕಿತರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಂಕಿತರ ಪೈಕಿ ಬಹುತೇಕರು ಮನೆಯಲ್ಲಿ ಪ್ರತ್ಯೇಕವಾಗಿ ವಾಸವಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಏರಿಕೆಯಾಗಿಲ್ಲ ಎಂದಿದ್ದಾರೆ.

‘ಸೋಂಕು ಅಪಾಯಕಾರಿಯಾಗಿ ಉಲ್ಬಣಗೊಳ್ಳದಿದ್ದರೂ ರಾಜ್ಯಗಳು ಪರೀಕ್ಷೆ ಹೆಚ್ಚಿಸುವ ಮತ್ತು ಕಣ್ಗಾವಲು ವ್ಯವಸ್ಥೆಯನ್ನು ಚುರುಕುಗೊಳಿಸಬೇಕಾದ ಅಗತ್ಯವಿದೆ’ ಎಂದು ನೀತಿ ಆಯೋಗದ ಸದಸ್ಯ ಡಾ.ವಿ.ಕೆ.ಪೌಲ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT