ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ವಿದ್ಯಾರ್ಥಿಗಳ ಒಕ್ಕೂಟದ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದೆ. ನಾಲ್ಕೂ ಸ್ಥಾನಗಳಲ್ಲೂ ಎಡ ಪಕ್ಷಗಳ ವಿದ್ಯಾರ್ಥಿ ಸಂಘಟನೆಗಳು ಜಯ ಸಾಧಿಸುವ ಮೂಲಕ ಆರ್ಎಸ್ಎಸ್ ಬೆಂಬಲಿತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಅನ್ನು ಚುನಾವಣೆಯಲ್ಲಿ ಮಣಿಸಿವೆ.

ಅಖಿಲ ಭಾರತ ವಿದ್ಯಾರ್ಥಿಗಳ ಅಸೋಸಿಯೇಷನ್ (ಎಐಎಸ್ಎ), ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾ (ಎಸ್ಎಫ್ಐ), ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಷನ್ (ಡಿಎಸ್ಎಫ್) ಸಂಘಟನೆಳು ಎಡ ಒಕ್ಕೂಟದ ಭಾಗವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆಲುವು ಸಾಧಿಸಿವೆ.

ಎಬಿವಿಪಿಯ ವಿಕಾಸ್ ಪಟೇಲ್ ಅವರನ್ನು 449 ಮತಗಳಿಂದ ಸೋಲಿಸಿ ಅದಿತಿ ಮಿಶ್ರಾ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರ ಸ್ಥಾನಕ್ಕೆ ಗೋಪಿಕಾ ಬಾಬು, ಪ್ರಧಾನ ಕಾರ್ಯದರ್ಶಿಯಾಗಿ ಸುನಿಲ್ ಯಾದವ್, ಜಂಟಿ ಕಾರ್ಯದರ್ಶಿಯಾಗಿ ಡ್ಯಾನಿಶ್ ಅಲಿ ಗೆಲುವು ಸಾಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.