ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ (ಜೆಎನ್ಯು) ಗುರುವಾರ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ 14 ಪ್ರತಿಭಟನಕಾರರನ್ನು ಪೊಲೀಸರು ಬಂಧಿಸಿದ್ದಾರೆ.

ಒಟ್ಟಾರೆ 51 ಜನರನ್ನು ವಶಕ್ಕೆ ಪಡೆಯಲಾಗಿದ್ದು, ಜೆಎನ್ಯು ವಿದ್ಯಾರ್ಥಿ ಸಂಘದ (ಜೆಎನ್ಯುಎಸ್ಯು) ಅಧ್ಯಕ್ಷೆ ಅದಿತಿ ಮಿಶ್ರಾ, ಉಪಾಧ್ಯಕ್ಷೆ ಗೋಪಿಕಾ ಬಾಬು, ಮಾಜಿ ಅಧ್ಯಕ್ಷ ನಿತೀಶ್ ಕುಮಾರ್ ಮತ್ತು ಜಂಟಿ ಕಾರ್ಯದರ್ಶಿ ಡ್ಯಾನಿಶ್ ಅಲಿ ಸೇರಿದಂತೆ 14 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುಜಿಸಿ ಮಾನದಂಡಗಳ ಅನುಷ್ಠಾನ, ಜೆಎನ್ಯುಎಸ್ಯು ಪದಾಧಿಕಾರಿಗಳನ್ನು ವಜಾಗೊಳಿಸುವುದು ಮತ್ತು ಪ್ರಸ್ತಾವಿತ ರೋಹಿತ್ ಕಾಯ್ದೆಯ ಕುರಿತು ಜೆಎನ್ಯು ಉಪಕುಲಪತಿ ಶಾಂತಿಶ್ರೀ ಧುಲಿಪುಡಿ ಪಂಡಿತ್ ಅವರು ಇತ್ತೀಚೆಗೆ ಪಾಡ್ಕಾಸ್ಟ್ ಒಂದರಲ್ಲಿ ನೀಡಿದ ಹೇಳಿಕೆಯನ್ನು ವಿರೋಧಿಸಿ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ.

‘ಪ್ರತಿಭಟನಕಾರರನ್ನು ಪೊಲೀಸರು ವಿಶ್ವವಿದ್ಯಾಲಯ ಗೇಟ್ ಬಳಿ ತಡೆದರು. ಇದು ಘರ್ಷಣೆಗೆ ಕಾರಣವಾಯಿತು. ಘರ್ಷಣೆಯ ವೇಳೆ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದು, ಅನೇಕ ಪೊಲೀಸರು ಗಾಯಗೊಂಡಿದ್ದಾರೆ’ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.