ನವದೆಹಲಿ: ‘ಭಾರತದಲ್ಲಿ ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯ ಏಕ ಡೋಸ್ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ ಅವರು ಶನಿವಾರ ತಿಳಿಸಿದ್ದಾರೆ.

‘ಭಾರತವು ತನ್ನ ಲಸಿಕಾ ಬುಟ್ಟಿಯನ್ನು ಇನ್ನಷ್ಟು ವಿಸ್ತರಿಸಿದೆ. ಭಾರತದಲ್ಲಿ ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯ ಒಂದು ಡೋಸ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ. ಪ್ರಸ್ತುತ ದೇಶದಲ್ಲಿ ಐದು ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡಲಾಗಿದೆ. ಇದು ಕೊರೊನಾ ವಿರುದ್ಧದ ದೇಶದ ಹೋರಾಟಕ್ಕೆ ಇನ್ನಷ್ಟು ಬಲ ನೀಡಲಿದೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಅಮೆರಿಕ ಮೂಲದಜಾನ್ಸನ್ ಅಂಡ್ ಜಾನ್ಸನ್ ಕಂಪನಿಯು ತನ್ನ ಏಕ ಡೋಸ್ ಲಸಿಕೆಯ ತುರ್ತು ಬಳಕೆಗೆ ಶುಕ್ರವಾರ ಅನುಮತಿ ಕೋರಿತ್ತು. ಅದೇ ದಿನ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರವು (ಡಿಸಿಜಿಐ) ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡಿದೆ.

ಭಾರತದಲ್ಲಿ ಕೋವಿಶೀಲ್ಡ್, ಕೋವ್ಯಾಕ್ಸಿನ್, ಸ್ಪುಟ್ನಿಕ್ ವಿ, ಮೊಡೆರ್ನಾ ಮತ್ತು ಹೊಸದಾಗಿ ಜಾನ್ಸನ್ ಅಂಡ್ ಜಾನ್ಸನ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ.

ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿ 80 ಕೋಟಿ ಜನರಿಗೆ ಉಚಿತ ಪಡಿತರ: ಪ್ರಧಾನಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.