ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಡಿಎ ಸೇರಿಸಲು ಜಗನ್‌ಗೆ ಕೇಂದ್ರ ಸಚಿವ ಆಹ್ವಾನ

Last Updated 15 ಜುಲೈ 2018, 17:01 IST
ಅಕ್ಷರ ಗಾತ್ರ

ಹೈದರಾಬಾದ್‌: ವೈಎಸ್ಸಾರ್‌ ಕಾಂಗ್ರೆಸ್‌ ಮುಖ್ಯಸ್ಥ ವೈ.ಎಸ್‌ ಜಗನ್ಮೋಹನ್ ರೆಡ್ಡಿ ಅವರಿಗೆ ಎನ್‌ಡಿಎ ಸೇರುವಂತೆ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಅಠವಳೆ ಆಹ್ವಾನ ನೀಡಿದ್ದಾರೆ.

ಜಗನ್‌ 2019ರ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಕೈಜೋಡಿಸಿದರೆ ಆಂಧ್ರಪ್ರದೇಶದ ಮುಂದಿನ ಮುಖ್ಯಮಂತ್ರಿಯಾಗಬಹುದು. ಬಿಜೆಪಿ ಮತ್ತು ಆರ್‌ಪಿಐ ಕೂಡ ಅವರನ್ನು ಬೆಂಬಲಿಸುತ್ತವೆ. ಜತೆಗೆ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನವೂ ಸಿಗಲಿದೆ ಎಂದು ಸಚಿವರು ತಿಳಿಸಿದರು.

ಎನ್‌ಡಿಎ ತೊರೆದು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ದೊಡ್ಡ ತಪ್ಪು ಮಾಡಿದರು. ಅವರು ಎನ್‌ಡಿಎ ಜತೆಗೆ ಉಳಿದಿದ್ದರೆ ಪ್ರಧಾನಿ ಮೋದಿ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಬೇಡಿಕೆ ಖಂಡಿತಾ ಪರಿಗಣಿಸುತ್ತಿದ್ದರು. ಎನ್‌ಡಿಎ ಬೆಂಬಲಿಸಲು ನಾಯ್ಡು ತಮ್ಮ ನಿರ್ಧಾರ ಪುನರ್‌ ಪರಿಶೀಲಿಸುವುದು ಒಳಿತು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT