ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IT ಮರುಮೌಲ್ಯಮಾಪನಕ್ಕೆ ಕೋರಿಕೆ: ಕಾಂಗ್ರೆಸ್ ಅರ್ಜಿ ತಿರಸ್ಕರಿಸಿದ ದೆಹಲಿ HC

Published 22 ಮಾರ್ಚ್ 2024, 14:57 IST
Last Updated 22 ಮಾರ್ಚ್ 2024, 14:57 IST
ಅಕ್ಷರ ಗಾತ್ರ

ನವದೆಹಲಿ: ಆದಾಯ ತೆರಿಗೆ ಇಲಾಖೆಯು ತನ್ನ ವಿರುದ್ಧ ಆರಂಭಿಸಿರುವ ಮರುಮೌಲ್ಯಮಾಪನ ಪ್ರಕ್ರಿಯೆಗಳನ್ನು ಪ್ರಶ್ನಿಸಿ ಕಾಂಗ್ರೆಸ್‌ ಪಕ್ಷ ಸಲ್ಲಿಸಿದ್ದ ಅರ್ಜಿಗಳನ್ನು ದೆಹಲಿ ಹೈಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಯಶವಂತ್‌ ವರ್ಮಾ ಮತ್ತು ಪುರುಷೇಂದ್ರ ಕುಮಾರ್‌ ಕೌರವ್‌ ಅವರ ಪೀಠವು, ಈ ಕುರಿತ ರಿಟ್‌ ಅರ್ಜಿಗಳನ್ನು ವಜಾಗೊಳಿಸಿರುವುದಾಗಿ ತಿಳಿಸಿತು.

ಕಾಂಗ್ರೆಸ್‌ ಪಕ್ಷವು 2014–15, 2015–16 ಮತ್ತು 2016–17ರ ತೆರಿಗೆ ಮರುಮೌಲ್ಯಮಾಪನ ಪ್ರಕ್ರಿಯೆಗಳನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿತ್ತು. ಈ ಕುರಿತು ವಿಚಾರಣೆ ನಡೆಸಿದ್ದ ಪೀಠವುವು ಮಾರ್ಚ್‌ 20ರಂದು ತನ್ನ ಆದೇಶವನ್ನು ಕಾಯ್ದಿರಿಸಿತ್ತು.

ಕಾಂಗ್ರೆಸ್‌ ಪಕ್ಷದ ಪರ ಹಾಜರಿದ್ದ ಹಿರಿಯ ವಕೀಲ ಅಭಿಷೇಕ್‌ ಸಿಂಘ್ವಿ ಅವರು, ತೆರಿಗೆ ಮರುಮೌಲ್ಯಮಾಪನ ಪ್ರಕ್ರಿಯೆಗಳನ್ನು ಮಿತಿಯಿಂದ ನಿರ್ಬಂಧಿಸಲಾಗಿದೆ ಎಂದು ಪ್ರತಿಪಾದಿಸಿದ್ದರು.

ತೆರಿಗೆ ಪ್ರಾಧಿಕಾರವು ಯಾವುದೇ ಶಾಸನಬದ್ಧ ನಿಬಂಧನೆಗಳನ್ನು ಉಲ್ಲಂಘಿಸಿಲ್ಲ ಎಂದು ಪ್ರತಿಪಾದಿಸಿದ ಐ.ಟಿ ಇಲಾಖೆಯು, ವಶಪಡಿಸಿಕೊಂಡಿರುವ ದಾಖಲೆಗಳ ಪ್ರಕಾರ ಪಕ್ಷವು ಸುಮಾರು ₹520 ಕೋಟಿ ಆದಾಯವನ್ನು ಬಹಿರಂಗಪಡಿಸಿಲ್ಲ ಎಂದು ತಿಳಿಸಿದೆ.

₹ 100 ಕೋಟಿ ಬಾಕಿ ತೆರಿಗೆ ವಸೂಲಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್‌ಗೆ ನೀಡಿದ್ದ ನೋಟಿಸ್‌ಗೆ ತಡೆಯಾಜ್ಞೆ ನೀಡಲು ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ ಇತ್ತೀಚೆಗೆ ನಿರಾಕರಿಸಿತ್ತು. 2018–19ರ ಮೌಲ್ಯಮಾಪನ ವರ್ಷಕ್ಕೆ ಸಂಬಂಧಿಸಿದಂತೆ ಮೌಲ್ಯಮಾಪನ ಅಧಿಕಾರಿಯು ₹ 100 ಕೋಟಿಗಿಂತ ಹೆಚ್ಚಿನ ತೆರಿಗೆ ಪಾವತಿಸುವಂತೆ ಸೂಚಿಸಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT