ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲು ಇಂದು (ಬುಧವಾರ) ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಲಿದ್ದಾರೆ.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ರಾಷ್ಟ್ರ ರಾಜಧಾನಿಗೆ ವಿಜಯ್ ಅವರ ಮೊದಲ ಅಧಿಕೃತ ಭೇಟಿ ಇದಾಗಿದೆ.

ವಿಜಯ್ ಅವರ ಭೇಟಿಯ ಕುರಿತು ಅಧಿಕೃತ ವೇಳಾಪಟ್ಟಿ ಬಿಡುಗಡೆಯಾಗದಿದ್ದರೂ, ಮುಖ್ಯಮಂತ್ರಿ ಅವರು ಬೆಳಿಗ್ಗೆ 10 ಗಂಟೆಗೆ ಚೆನ್ನೈ ವಿಮಾನ ನಿಲ್ದಾಣದಿಂದ ದೆಹಲಿಗೆ ಹೊರಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿ ಅವರೊಂದಿಗಿನ ಭೇಟಿಯು ಸಂಜೆ 4.30 ಕ್ಕೆ ನಿಗದಿಯಾಗಿದ್ದು, ಈ ಸಂದರ್ಭದಲ್ಲಿ ವಿಜಯ್ ಅವರು ರಾಜ್ಯದ ದೀರ್ಘಕಾಲದ ಬೇಡಿಕೆಗಳನ್ನು ಒಳಗೊಂಡ ಜ್ಞಾಪನಾ ಪತ್ರವನ್ನು ಸಲ್ಲಿಸಲಿದ್ದಾರೆ.

ಬೇಡಿಕೆಗಳ ಪಟ್ಟಿಯಲ್ಲಿ ಕಲ್ಯಾಣ ಮತ್ತು ಮೂಲಸೌಕರ್ಯ ಯೋಜನೆಗಳಿಗೆ ಧನಸಹಾಯ, ಅಭಿವೃದ್ಧಿ ಉಪಕ್ರಮಗಳಿಗೆ ಅನುಮತಿ ಮತ್ತು ಮೇಕೆದಾಟು ನೀರಿನ ವಿವಾದಕ್ಕೆ ಪರಿಹಾರ ಸೂಚಿಸುವಂತೆ ಒತ್ತಾಯಿಸುವ ಸಾಧ್ಯತೆಯಿದೆ.

ರಾಜ್ಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಯೋಜನೆಗಳಿಗೆ ಆರ್ಥಿಕ ನೆರವು ಕೋರಲು ವಿಜಯ್ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೂ ಚರ್ಚೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಅದೇ ರೀತಿ, ತಮ್ಮ ಭೇಟಿಯ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನೂ ಭೇಟಿಯಾಗುವ ನಿರೀಕ್ಷೆಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.