ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ರಕರ್ತ ವಾಗ್ಳೆ ಕಾರಿನ ಮೇಲೆ ದಾಳಿ

Published 10 ಫೆಬ್ರುವರಿ 2024, 4:34 IST
Last Updated 10 ಫೆಬ್ರುವರಿ 2024, 4:34 IST
ಅಕ್ಷರ ಗಾತ್ರ

ಪುಣೆ (ಪಿಟಿಐ): ಪತ್ರಕರ್ತ ನಿಖಿಲ್ ವಾಗ್ಳೆ ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಪುಣೆಯಲ್ಲಿ ಬಿಜೆಪಿ ಕಾರ್ಯಕರ್ತರು ಅವರ ಕಾರಿನ ಮೇಲೆ ಶುಕ್ರವಾರ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಜೆಪಿ ನಾಯಕ ಎಲ್‌.ಕೆ. ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿದ ನಂತರ ನಿಖಿಲ್‌ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಅಡ್ವಾಣಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯ ಕರ್ತರ ಗುಂಪು, ಖಂಡೋಜಿ ಬಾಬಾ ಚೌಕ್‌ನಲ್ಲಿ ನಿಖಿಲ್‌ ಅವರ ಕಾರನ್ನು ಅಡ್ಡ ಗಟ್ಟಿ ದಾಳಿ ಮಾಡಿದೆ. ಇದರಿಂದ ಕಾರಿನ ವಿಂಡ್‌ಸ್ಕ್ರೀನ್ ಮತ್ತು ಕಿಟಕಿ ಗಾಜು ಹಾನಿಗೀಡಾಗಿವೆ.

ಇಲ್ಲಿನ ಸಿಂಘಾಡ್ ರಸ್ತೆ ಪ್ರದೇಶದಲ್ಲಿ ರಾಷ್ಟ್ರ ಸೇವಾದಳ ಆಯೋಜಿಸಿದ್ದ ‘ನಿರ್ಭಯ್ ಬಾನೊ’ ಕಾರ್ಯಕ್ರಮಕ್ಕೆ ಪೊಲೀಸ್ ರಕ್ಷಣೆಯಲ್ಲಿ ವಾಗ್ಳೆ ಅವರು ಅಸೀಮ್ ಸರೋದೆ ಮತ್ತು ವಿಶ್ವಂಭರ ಚೌಧರಿ ಅವರ ಜತೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಬಿಜೆಪಿ ಕಾರ್ಯಕರ್ತರು ಕಾರಿನ ಮೇಲೆ ಪೆನ್ನಿನ ಶಾಯಿ ಎರಚಿದ್ದಾರೆ ಎಂದು ಡೆಕ್ಕನ್ ಠಾಣೆ ಅಧಿಕಾರಿ ಯೊಬ್ಬರು ತಿಳಿಸಿದ್ದಾರೆ.

ಪೊಲೀಸ್ ರಕ್ಷಣೆಯಲ್ಲಿ ನಿಖಿಲ್‌ ಅವರನ್ನು ಕಾರ್ಯಕ್ರಮದ ಸ್ಥಳಕ್ಕೆ ತಲುಪಿಸ ಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ವಾಗ್ಳೆ ವಿರುದ್ಧ ದೂರು:

 ಬಿಜೆಪಿಯ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಅವರಿಗೆ ಭಾರತರತ್ನ ಘೋಷಣೆ ಮಾಡಿದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಮತ್ತು ಅಡ್ವಾಣಿ ಅವರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದಡಿ ಪತ್ರಕರ್ತ ನಿಖಿಲ್‌ ವಾಗ್ಳೆ ವಿರುದ್ಧ ದೂರು ದಾಖಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

‘ಪುಣೆಯ ಸ್ಥಳೀಯ ಬಿಜೆಪಿ ನಾಯಕ ಸುನಿಲ್‌ ದೇವಧರ್‌ ನೀಡಿದ ದೂರಿನ ಮೇರೆಗೆ ನಿಖಿಲ್‌ ವಾಗ್ಲೆ ವಿರುದ್ಧ ವಿಶ್ರಮ್‌ ಭಾಗ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ತನಿಖೆ ನಡೆಯು ತ್ತಿದೆ’ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT