ಲಖನೌ: ಬಿಜೆಪಿ ಸರ್ಕಾರ ಭ್ರಷ್ಟಾಚಾರದ ಎಲ್ಲಾ ದಾಖಲೆಗಳನ್ನು ಮುರಿದಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಂಗಳವಾರ ಗಂಭೀರ ಆರೋಪ ಮಾಡಿದ್ದಾರೆ.

ಪ್ರತಿಯೊಂದು ಇಲಾಖೆಗಳಲ್ಲೂ ಭ್ರಷ್ಟಾಚಾರ ವ್ಯಾಪಿಸಿದ್ದು ಹೊಸ ಯೋಜನೆಗಳು, ಸಾರ್ವಜನಿಕ ಸೇವೆಗಳಲ್ಲಿ ಕಮಿಷನ್ ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ಆರೋಪಿಸಿದರು.

ಜಲ ಜೀವನ್ ಮಿಷನ್ ಯೋಜನೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು ವಿವಿಧ ಜಿಲ್ಲೆಗಳಲ್ಲಿ ನೀರಿನ ಟ್ಯಾಂಕ್ಗಳು ಕುಸಿಯುತ್ತಿವೆ, ಪೈಪ್ಲೈನ್ಗಳು ಒಡೆಯುತ್ತಿವೆ ಎಂದು ಆರೋಪಿಸಿದರು.

₹ 7 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಗೋರಖ್ಪುರ ಲಿಂಕ್ ಎಕ್ಸ್ಪ್ರೆಸ್ವೇನಲ್ಲಿ ವ್ಯಾಪಕ ಭ್ರಷ್ಟಾಚಾರವಾಗಿದೆ. ರಸ್ತೆಯಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ, ಕೆಲವೆಡೆ ರಸ್ತೆ ಕುಸಿದಿದೆ ಎಂದು ಅವರು ಆರೋಪ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.