ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ರಾಜ್ಯಸಭೆಯ ಸಭಾನಾಯಕ

Published 27 ಜೂನ್ 2024, 14:31 IST
Last Updated 27 ಜೂನ್ 2024, 14:31 IST
ಅಕ್ಷರ ಗಾತ್ರ

ನವದೆಹಲಿ: ರಾಜ್ಯಸಭೆಯ 264ನೇ ಅಧಿವೇಶನದ ಮೊದಲ ದಿನವಾದ ಗುರುವಾರ ಕೇಂದ್ರ ಆರೋಗ್ಯ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್‌ ಪ್ರಕಾಶ್‌ ನಡ್ಡಾ ಅವರನ್ನು ರಾಜ್ಯಸಭೆಯ ಸಭಾನಾಯಕರಾಗಿ ನೇಮಿಸಲಾಗಿದೆ.

‘ಜೆ.ಪಿ.ನಡ್ಡಾ ಅವರನ್ನು ರಾಜ್ಯಸಭೆಯ ಸಭಾ ನಾಯಕರಾಗಿ ನೇಮಿಸಲಾಗಿದೆ’ ಎಂದು ರಾಜ್ಯಸಭೆ ಸಭಾಪತಿ ಜಗದೀಪ್‌ ಧನ್‌ಕರ್‌ ಘೋಷಿಸುತ್ತಿದ್ದಂತೆಯೇ, ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು.

ಘೋಷಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಸದನದಲ್ಲಿ ಹಾಜರಿದ್ದರು.

ನಡ್ಡಾ ಅವರನ್ನು ರಾಜ್ಯಸಭೆಯ ಸಭಾನಾಯಕರಾಗಿ ಆಯ್ಕೆ ಮಾಡಲು ಬಿಜೆಪಿ ಈ ಹಿಂದೆ ನಿರ್ಧರಿಸಿ, ರಾಜ್ಯಸಭೆಯ ಗಮನಕ್ಕೆ ತಂದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT