ನವದೆಹಲಿ: ‘ದೇಶದಲ್ಲಿ ರಸಗೊಬ್ಬರಗಳ ಕೊರತೆ ಇಲ್ಲ. ಅಗತ್ಯಕ್ಕಿಂತ ಹೆಚ್ಚಿನ ದಾಸ್ತಾನು ಇದೆ’ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆ.ಪಿ. ನಡ್ಡಾ ತಿಳಿಸಿದ್ದಾರೆ.

‘ರಸಗೊಬ್ಬರದ ಕೊರತೆ ಇದೆ’ ಎಂಬ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಜೆ.ಪಿ. ನಡ್ಡಾ, ‘ಖರ್ಗೆ ಅವರು ತಪ್ಪು ಮಾಹಿತಿ ನೀಡುವ ಮೂಲಕ ರೈತರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ಇಲ್ಲದ ಆತಂಕವನ್ನು ಸೃಷ್ಟಿಸುತ್ತಿದ್ದಾರೆ’ ಎಂದು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಖರ್ಗೆ ಇಷ್ಟೊಂದು ತಪ್ಪು ಮಾಹಿತಿಯನ್ನು ಹೊಂದಿದ್ದಾರೆಂಬುದನ್ನು ನಂಬಲು ಕಷ್ಟವಾಗುತ್ತಿದೆ. ಬಹುಶಃ ದೇಶವನ್ನು ದಾರಿ ತಪ್ಪಿಸಲು ಬಯಸುವಂತಹ ವ್ಯಕ್ತಿಗಳು ಅವರ ಸುತ್ತಮುತ್ತ ಇದ್ದು, ಅವರ ಪ್ರಭಾವದಿಂದ ಇಂತಹ ಹೇಳಿಕೆ ನೀಡುತ್ತಿರಬಹುದು’ ಎಂದು ತಿಳಿಸಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶದ ರೈತರನ್ನು ಜಾಗತಿಕ ಬೆಲೆಗಳ ಏರಿಳಿತದ ಆಘಾತಗಳಿಂದ ರಕ್ಷಿಸಲಾಗಿದೆ’ ಎಂದಿದ್ದಾರೆ.

‘ಒಂದು ಚೀಲ ಯೂರಿಯಾಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ₹4 ಸಾವಿರಕ್ಕಿಂತ ಹೆಚ್ಚಿನ ಬೆಲೆ ಇದೆ. ಆದರೆ, ನಮ್ಮ ರೈತರು ಕೇವಲ ₹266ಕ್ಕೆ ಪಡೆಯುತ್ತಿದ್ದಾರೆ. ಕೋವಿಡ್ ಅವಧಿಯಿಂದ ಪ್ರತಿ ಚೀಲ ಡಿಎಪಿಯನ್ನು ₹1,350ಕ್ಕೆ ಪಡೆಯುತ್ತಿದ್ದಾರೆ. ಇದರ ಬೆಲೆ ಜಾಗತಿಕ ಮಟ್ಟದಲ್ಲಿ ₹4 ಸಾವಿರಕ್ಕಿಂತ ಹೆಚ್ಚಿದೆ’ ಎಂದು ಮಾಹಿತಿ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-4-742678802

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.