ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಮಿಯಾ ಹಿಂಸಾಚಾರ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಧೀಶ

Last Updated 11 ಫೆಬ್ರುವರಿ 2023, 13:37 IST
ಅಕ್ಷರ ಗಾತ್ರ

ನವದೆಹಲಿ: 2019ರ ಜಾಮಿಯಾ ನಗರ ಹಿಂಸಾಚಾರ ಪ್ರಕರಣದಲ್ಲಿ ವಿದ್ಯಾರ್ಥಿ ಮುಖಂಡರಾದ ಶಾರ್ಜಿಲ್‌ ಇಮಾಮ್‌ ಮತ್ತು ಆಸಿಫ್‌ ಇಕ್ಬಾಲ್‌ ತನ್ಹಾ ಹಾಗೂ ಇತರ ಒಂಬತ್ತು ಮಂದಿಯನ್ನು ಈಚೆಗೆ ಬಿಡುಗಡೆಗೊಳಿಸಿದ್ದ ದೆಹಲಿಯ ಜಿಲ್ಲಾ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ಅರುಲ್‌ ವರ್ಮಾ ಅವರು ಇದೇ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.

‘ವೈಯಕ್ತಿಕ ಕಾರಣಗಳಿಂದ ಈ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯುತ್ತಿದ್ದೇನೆ. ಇದರ ವಿಚಾರಣೆಯನ್ನು ವರ್ಗಾಯಿಸಲು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಲ್ಲಿ ಫೆಬ್ರುವರಿ 13ರಂದು ವಿನಂತಿಸಲಾಗುವುದು’ ಎಂದು ಅವರು ತಿಳಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯ ವೇಳೆ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿ ಹಲವು ವಿದ್ಯಾರ್ಥಿ ಮುಖಂಡರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT