ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ಅಕ್ರಮ ವರ್ಗಾವಣೆ ಪ್ರಕರಣ | ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

Published 23 ಮೇ 2023, 11:03 IST
Last Updated 23 ಮೇ 2023, 11:03 IST
ಅಕ್ಷರ ಗಾತ್ರ

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ ಮನೀಷ್‌ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಜೂನ್‌ 1ರವರೆಗೆ ವಿಸ್ತರಿಸಿ ದೆಹಲಿಯ ನ್ಯಾಯಾಲಯ ಮಂಗಳವಾರ ಆದೇಶ ಹೊರಡಿಸಿದೆ.

ಸಿಸೋಡಿಯಾ ಅವರಿಗೆ ಜೈಲಿನ ಒಳಗಡೆ ಮೇಜು, ಕುರ್ಚಿ ಹಾಗೂ ಪುಸ್ತಕಗಳನ್ನು ಒದಗಿಸುವ ವಿಷಯವನ್ನು  ಪರಿಗಣಿಗಣಿಸಬೇಕೆಂದೂ ನ್ಯಾಯಾಧೀಶರು ಜೈಲಿನ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ನ್ಯಾಯಾಲಯದಿಂದ ಹೊರಬಂದ ಬಳಿಕ ಮಾತನಾಡಿದ ಸಿಸೋಡಿಯಾ, ದೆಹಲಿ ಸರ್ಕಾರದ ಅಧಿಕಾರಿಗಳ ಮೇಲೆ ನಿಯಂತ್ರಣ ಹೊಂದಲು ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿರುವುದು ಸರಿಯಲ್ಲ.

‘ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಹೊಂದಿಲ್ಲ. ಅಹಂಕಾರಿಯಾಗಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT