ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಪ್ರೀಂಗೆ ರಾಜ್ಯ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಾಹೇಶ್ವರಿ

Last Updated 16 ಜನವರಿ 2019, 14:25 IST
ಅಕ್ಷರ ಗಾತ್ರ

ನವದೆಹಲಿ: ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಾಹೇಶ್ವರಿ ಅವರಿಗೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಪದನ್ನೋತಿ ನೀಡಲು ಕೊಲಿಜಿಯಂ ಸಮಿತಿ ಮಾಡಿದ್ದ ಶಿಫಾರಸಿಗೆ ಬುಧವಾರ ಸಂಜೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅಂಕಿತ ಹಾಕಿದ್ದಾರೆ.

ದಿನೇಶ್‌ ಮಾಹೇಶ್ವರಿ ಅವರು 2018ರ ಫೆಬ್ರುವರಿ 12ರಂದು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ‍ಪದಗ್ರಹಣ ಮಾಡಿದ್ದರು.

ಸುಪ್ರೀಂ ಕೋರ್ಟ್‌ನ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಕೊಲಿಜಿಯಂ ಸಮಿತಿಯು 2018ರ ಡಿಸೆಂಬರ್‌ನಲ್ಲಿ ದೆಹಲಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಾಜೇಂದ್ರ ಮೆನನ್‌ ಮತ್ತು ರಾಜಸ್ಥಾನ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪ್ರದೀಪ್‌ ನಂದ್ರಾಜೋಗ್‌ ಅವರನ್ನು ಸುಪ್ರೀಂ ಕೋರ್ಟ್‌ಗೆ ಪದನ್ನೋತಿ ನೀಡಲು ಶಿಫಾರಸು ಮಾಡಲು ನಿರ್ಧರಿಸಿತ್ತು.

ಆದರೆ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ, ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಎ.ಕೆ.ಸಿಕ್ರಿ, ಎಸ್.ಎ.ಬೊಬ್ಡೆ, ಎನ್‌.ವಿ.ರಮಣ ಹಾಗೂ ಅರುಣ್‌ ಮಿಶ್ರಾ ಅವರನ್ನು ಒಳಗೊಂಡ ಕೊಲಿಜಿಯಂ ಸಮಿತಿ ಶಿಫಾರಸು 2019ರ ಜನವರಿಯಲ್ಲಿ ಬದಲಾಯಿತು.ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಾಹೇಶ್ವರಿ ಹಾಗೂದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಅವರ ಹೆಸರುಗಳನ್ನು ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತು.

ನ್ಯಾಯಮೂರ್ತಿಪ್ರದೀಪ್‌ ನಂದ್ರಾಜೋಗ್‌ ಅವರನ್ನು ಶಿಫಾರಸಿನಿಂದ ಕೈಬಿಟ್ಟಿದ್ದನ್ನು ನ್ಯಾಯಮೂರ್ತಿ ಎಸ್‌.ಕೆ.ಕೌಲ್‌ ಈಗಾಗಲೇ ವಿರೋಧಿಸಿದ್ದಾರೆ. ಬಾರ್‌ ಕೌನ್ಸಿಲ್‌ ಸಹ ಕೊಲಿಜಿಯಂ ನಿರ್ಧಾರದ ವಿರುದ್ಧ ಪ್ರತಿಭಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT