ದಿಬ್ರುಗಢ (): ‘ಗಾಯಕ ಜುಬೀನ್ ಗರ್ಗ್ ಅವರ ಸಾವಿನ ಪ್ರಕರಣದಲ್ಲಿ ನ್ಯಾಯ ಸಿಕ್ಕೇ ಸಿಗುತ್ತದೆ. ನ್ಯಾಯಾಂಗದ ಮೇಲೆ ನಂಬಿಕೆ ಇರಲಿ’ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದರು.

ಜುಬೀನ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶುಕ್ರವಾರ ದೋಷಾರೋಪ ಪಟ್ಟಿಯನ್ನು ಸಲ್ಲಿಸಲಿದ್ದು, ಈ ಮಧ್ಯೆ ಶರ್ಮಾ ಅವರು ಈ ಹೇಳಿಕೆ ನೀಡಿದರು.

‘ಎಸ್ಐಟಿಯು ದೋಷಾರೋಪ ಪಟ್ಟಿಯನ್ನು ಸಲ್ಲಿಸಲಿದೆ. ನ್ಯಾಯಾಲಯವು ಅದನ್ನು ಪರಿಶೀಲಿಸಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡಲಿದೆ’ ಎಂದು ಹೇಳಿದರು.

ಗಾಯಕ ಜುಬೀನ್ ಗರ್ಗ್ ಅವರು ಸೆಪ್ಟೆಂಬರ್ 19ರಂದು ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ನಡೆಸುತ್ತಿದ್ದ ವೇಳೆ ಮೃತಪಟ್ಟಿದ್ದರು. ಈಶಾನ್ಯ ಭಾರತ ಉತ್ಸವದಲ್ಲಿ ಪಾಲ್ಗೊಳ್ಳಲು ಅವರು ಅಲ್ಲಿಗೆ ತೆರಳಿದ್ದರು.

ವಿಶೇಷ ತನಿಖಾ ತಂಡ (ಎಸ್ಐಟಿ) ಪ್ರಕರಣದ ತನಿಖೆ ನಡೆಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.