ನವದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವರಾಗಿ ಜೋತಿರಾದಿತ್ಯ ಸಿಂಧಿಯಾ ಹಾಗೂ ಅದೇ ಖಾತೆಯ ಸಹಾಯಕ ಸಚಿವರಾಗಿ ಜನರಲ್ ವಿ.ಕೆ.ಸಿಂಗ್ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು.

ಕಳೆದ ವರ್ಷದ ಮಾರ್ಚ್ ತಿಂಗಳಲ್ಲಿ ಬಿಜೆಪಿ ಸೇರಿದ ಜ್ಯೋತಿರಾದಿತ್ಯ ಸಿಂಧಿಯಾ, ನಂತರ ಆ ಪಕ್ಷದ ರಾಜ್ಯಸಭಾ ಸದಸ್ಯರಾದರು. ಬುಧವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಕೊರೊನಾ ಸಾಂಕ್ರಾಮಿಕದಿಂದಾಗಿ ನಾಗರಿಕ ವಿಮಾನಯಾನ ಕ್ಷೇತ್ರವು ಹಲವು ಸವಾಲುಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಸಿಂಧಿಯಾ ಆ ಇಲಾಖೆಯ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಜೋತಿರಾದಿತ್ಯ ಸಿಂಧಿಯಾ ಅವರು ದೂರಸಂಪರ್ಕ, ವಾಣಿಜ್ಯ ಮತ್ತು ಕೈಗಾರಿಕೆ, ಇಂಧನ ಖಾತೆಯ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.

2020ರಲ್ಲಿ ಮಧ್ಯಪ್ರದೇಶದಲ್ಲಿ ನಡೆದ ರಾಜಕೀಯ ಸ್ಥಿತ್ಯಂತರಗಳಿಂದಾಗಿ ಜೋತಿರಾದಿತ್ಯ ಸಿಂಧಿಯಾ, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.