ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BRS ಸರ್ವಾಧಿಕಾರಿ ಸರ್ಕಾರ ಎಂದ ರಾಜ್ಯಪಾಲರಿಗೆ ಕೆಟಿಆರ್‌ ತಿರುಗೇಟು

Published 26 ಜನವರಿ 2024, 10:50 IST
Last Updated 26 ಜನವರಿ 2024, 10:50 IST
ಅಕ್ಷರ ಗಾತ್ರ

ಹೈದರಾಬಾದ್‌: ಗಣರಾಜ್ಯೋತ್ಸವದ ಭಾಷಣದಲ್ಲಿ ಈ ಹಿಂದಿನ ತಮ್ಮ ಸರ್ಕಾರವನ್ನು ಟೀಕೆ ಮಾಡಿದ ತೆಲಂಗಾಣ ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ಅವರಿಗೆ ಬಿಆರ್‌ಎಸ್‌ ಪಕ್ಷದ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ತಿರುಗೇಟು ನೀಡಿದ್ದಾರೆ.

ರಾಜ್ಯಪಾಲರ ಭಾಷಣ ಅಚ್ಚರಿ ತಂದಿದೆ ಎಂದು ಹೇಳಿರುವ ಅವರು, ಇದು ಕಾಂಗ್ರೆಸ್ ಪಕ್ಷದ ಬಗ್ಗೆ ಅವರು ತೋರಿಸುತ್ತಿರುವ ಪ್ರೇಮದ ಸಂಕೇತ. ಇದು ಅಸಂಬದ್ಧ ಮಾತು ಎಂದು ಕಿಡಿಕಾರಿದ್ದಾರೆ.

‘ಈ ಹಿಂದಿನ ಸರ್ವಾಧಿಕಾರಿ ಸರ್ಕಾರ ಸಂವಿಧಾನದ ಸ್ಫೂರ್ತಿಗೆ ವಿರುದ್ಧವಾಗಿ ನಡೆದುಕೊಂಡಿತ್ತು. ತೆಲಂಗಾಣದ ಜನರು 10 ವರ್ಷಗಳ ಆಡಳಿತವನ್ನು ಕೊನೆಗೊಳಿಸಿದರು ’ ಎಂದು ರಾಜ್ಯಪಾಲರು ತಮ್ಮ ಭಾಷಣದಲ್ಲಿ ಹೇಳಿದ್ದರು.

‘ತೆಲಂಗಾಣದಲ್ಲಿ ಕಳೆದ 10 ವರ್ಷದಲ್ಲಿ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರ ಇತ್ತು. ರಾಜ್ಯಪಾಲರ ಭಾಷಣವು ಖಂಡನೆಗೆ ಅರ್ಹ. ರಾಜಭವನದಿಂದ ಇಂದು ಬೆಳಿಗ್ಗೆ ಬಂದ ಭಾಷಣಗಳು, ಪದಗಳು ಅಸಂಬದ್ಧವಾಗಿತ್ತು. ರಾಜ್ಯಪಾಲರು ಬಳಸಿದ ಪದವು ತೆಲಂಗಾಣದ ಜನರಿಗೆ ಮಾಡಿದ ಅವಮಾನವಾಗಿದೆ’ ಎಂದು ಕೆ.ಟಿ. ರಾಮರಾವ್ ಹೇಳಿದ್ದಾರೆ.

‘ರಾಜ್ಯಪಾಲರು ಬಿಜೆಪಿಯ ಕಾರ್ಯಕರ್ತೆ ಎಂದು ನಾವು ತಿಳಿದುಕೊಂಡಿದ್ದೆವು. ಆದರೆ ದುರದೃಷ್ಟವಶಾತ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಂತೆ ತೋರುತ್ತಿದೆ. ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ತಮ್ಮ ಅಭಿಮಾನ ಪ್ರದರ್ಶಿಸಬೇಕು ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT