ಹೈದರಾಬಾದ್: ಕಾಳೇಶ್ವರಂ ಏತ ನೀರಾವರಿ ಯೋಜನೆ ಹಗರಣಕ್ಕೆ ಸಂಬಂಧಿಸಿದಂತೆ ಬಿಆರ್ಎಸ್ ಮುಖ್ಯಸ್ಥ ಕೆ.ಚಂದ್ರಶೇಖರ್ ರಾವ್ (ಕೆಸಿಆರ್) ಮತ್ತು ಇತರ ಮೂವರಿಗೆ ತೆಲಂಗಾಣ ಹೈಕೋರ್ಟ್ ಬುಧವಾರ ಬಿಗ್ ರಿಲೀಫ್ ನೀಡಿದೆ.

ನಿವೃತ್ತ ನ್ಯಾಯಮೂರ್ತಿ ಪಿ.ಸಿ.ಘೋಷ್ ಸಮಿತಿ ವರದಿ ಆಧಾರದ ಮೇಲೆ ಕೆಸಿಆರ್ ಮತ್ತು ಇತರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ನ್ಯಾಯಾಲಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಕೆಸಿಆರ್, ಮಾಜಿ ಸಚಿವ ಟಿ.ಹರೀಶ್ ರಾವ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಪರೇಶ್ ಕುಮಾರ್ ಸಿಂಗ್ ಮತ್ತು ನ್ಯಾಯಮೂರ್ತಿ ಜಿ.ಎಂ.ಮೊಹಿದ್ದಿನ್ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.

ಸಮಿತಿ ಸಲ್ಲಿಸಿರುವ ವರದಿಯಲ್ಲಿ ಕೆಲವು ಲೋಪಗಳಿದ್ದು ಅರ್ಜಿದಾರರ ವಿವರಣೆ ಪಡೆಯದೆ ವರದಿಯನ್ನು ನೀಡಲಾಗಿದೆ. ಇದನ್ನು ಆಧರಿಸಿ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಆದಾಗ್ಯೂ, ತನಿಖಾ ಸಮಿತಿ ರಚನೆ ಕಾನೂನುಬಾಹಿರವೇನಲ್ಲ ಮತ್ತು ಅದು ಸಾಂವಿಧಾನಿಕವಾಗಿ ಸರಿಯಾಗಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ: ಬಿಆರ್ಎಸ್ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾದ ಕಾಳೇಶ್ವರಂ ಏತ ನೀರಾವರಿ ಯೋಜನೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪದ ಮೇಲೆ ನಿವೃತ್ತ ನ್ಯಾಯಮೂರ್ತಿ ಪಿ.ಸಿ. ಘೋಷ್ ನೇತೃತ್ವದ ಸಮಿತಿಯು ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.

ಈ ವರದಿಯಲ್ಲಿ ಕೆಸಿಆರ್ ಮತ್ತು ಹರೀಶ್ ರಾವ್ ಸೇರಿದಂತೆ ಇತರರು ಯೋಜನೆಯ ಅಕ್ರಮಗಳಿಗೆ ಹೊಣೆಗಾರರಾಗಿದ್ದಾರೆ ಎಂದು ಸಮಿತಿ ತಿಳಿಸಿತ್ತು. ಈ ವರದಿಯ ಆಧಾರದ ಮೇಲೆ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಪ್ರಕರಣವನ್ನು ಸಿಬಿಐಗೆ ವಹಿಸುವುದಾಗಿ ಘೋಷಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.