ಕೋಲ್ಕತ್ತ: ಒಂದು ಕಾಲದಲ್ಲಿ ಮನೆಗೆಲಸದವಳಾಗಿ ಕೆಲಸ ಮಾಡುತ್ತಿದ್ದ 37 ವರ್ಷದ ಮಹಿಳೆಯೊಬ್ಬರು ಸೋಮವಾರ ಪಶ್ಚಿಮ ಬಂಗಾಳ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಬಂಗಾಳದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಅವರ ಹೆಸರು ಕಲಿತಾ ಮಾಝಿ. ಪೂರ್ವ ಬರ್ಧಮಾನ್ ಜಿಲ್ಲೆಯ ಔಸ್ಗ್ರಾಮ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಅವರು, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿಯನ್ನು 12,535 ಮತಗಳ ಅಂತರದಿಂದ ಸೋಲಿಸುವ ಮೂಲಕ ಅಚ್ಚರಿಯ ಗೆಲುವು ಸಾಧಿಸಿದ್ದರು.

ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮಾತನಾಡಿದ ಕಲಿತಾ ಮಾಝಿ, ನನ್ನ ಜೀವನ ಈ ರೀತಿ ಬದಲಾಗುತ್ತದೆ ಎಂದು ನಾನು ಎಂದಿಗೂ ಊಹಿಸಿರಲಿಲ್ಲ. ನನ್ನ ಮೇಲೆ ನಂಬಿಕೆ ಇಟ್ಟು, ಪ್ರತಿ ಹಂತದಲ್ಲೂ ನನಗೆ ಅವಕಾಶಗಳನ್ನು ನೀಡಿದ ನನ್ನ ಪಕ್ಷಕ್ಕೆ ನಾನು ಕೃತಜ್ಞಳಾಗಿದ್ದೇನೆ ಎಂದು ಹೇಳಿದ್ದಾರೆ.

ಐದು ವರ್ಷಗಳ ನಂತರವೂ ತಾವು ಹೀಗೆಯೇ ಇರುವುದಾಗಿ ಭರವಸೆ ನೀಡಿರುವ ಮಾಝಿ, ಜೀವನ ಎಂದರೆ ಏನೆಂದು ನನಗೆ ಗೊತ್ತು, ನಾನು ಎಂದಿಗೂ ಬದಲಾಗುವುದಿಲ್ಲ. ನನ್ನ ಕೊನೆಯ ಉಸಿರಿರುವವರೆಗೂ ನಾನು ಹೀಗೆಯೇ ಇರುತ್ತೇನೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗಾಗಿ ಕಲ್ಯಾಣಕ್ಕಾಗಿ ನಾನು ಶ್ರಮಿಸುತ್ತೇನೆ. ನಾನು ಅವರಲ್ಲಿ ಒಬ್ಬಳಾಗಿರುವುದರಿಂದ ಅವರ ನಾಡಿಮಿಡಿತ ನನಗೆ ಗೊತ್ತು ಎಂದು ಹೇಳಿದ್ದಾರೆ.

ತಳಮಟ್ಟದ ಕಾರ್ಯಕರ್ತರನ್ನು ಉತ್ತೇಜಿಸುವ ಪಕ್ಷದ ನೀತಿಗೆ ಕಲಿತಾ ಮಾಝಿ ಅತ್ಯುತ್ತಮ ಉದಾಹರಣೆ ಎಂದು ಬಿಜೆಪಿ ನಾಯಕರು ಬಣ್ಣಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.