ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ: ಕೊಯಮತ್ತೂರಿನಿಂದ ಸ್ಪರ್ಧಿಸಲು ಕಮಲ್‌ ಒಲವು

Published 22 ಸೆಪ್ಟೆಂಬರ್ 2023, 15:34 IST
Last Updated 22 ಸೆಪ್ಟೆಂಬರ್ 2023, 15:34 IST
ಅಕ್ಷರ ಗಾತ್ರ

ಚೆನ್ನೈ: ಮುಂದಿನ ವರ್ಷ ನಡೆಯಲಿರುವ ಲೋಕಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಕೊಯಮತ್ತೂರು ಕ್ಷೇತ್ರದಿಂದ ಸ್ಪರ್ಧಿಸುವ ಒಲವನ್ನು ಮಕ್ಕಳ್‌ ನೀಧಿ ಮಯ್ಯಂ (ಎಂಎನ್‌ಎಂ) ಪಕ್ಷದ ಮುಖ್ಯಸ್ಥ ಹಾಗೂ ಚಿತ್ರ ನಟ ಕಮಲ್‌ ಹಾಸನ್‌ ಅವರು ಶುಕ್ರವಾರ ವ್ಯಕ್ತಪಡಿಸಿದ್ದಾರೆ.

ಪಕ್ಷದ ಕಾರ್ಯಕರ್ತರ ಜೊತೆ ಮಾತನಾಡಿದ ಅವರು, ‘ನನ್ನ ‘ವಿಕ್ರಂ’ ಸಿನಿಮಾ ನೋಡಲು ಬರುವ ಜನ, ನನಗೆ ಮತ ಹಾಕಲು ಯಾಕೆ ಬರಲಾರರು’ ಎಂದಿದ್ದಾರೆ.

ಕಮಲ್‌ ಅವರು ಸ್ಪರ್ಧೆಗೆ ಒಲವು ತೋರಿರುವುದು, ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟಕ್ಕೆ ಎಂಎನ್‌ಎಂ ಸೇರ್ಪಡೆಯಾಗುವ ಸಾಧ್ಯತೆಯ ಬಗ್ಗೆ ಚರ್ಚೆ ಹುಟ್ಟುಹಾಕಿದೆ.

2021ರ ಚುನಾವಣೆಯಲ್ಲಿ ಕೊಯಮತ್ತೂರು (ದಕ್ಷಿಣ) ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಮಲ್‌ ಹಾಸನ್‌ ಅವರು ಕಡಿಮೆ ಅಂತರದ ಮತಗಳಿಂದ ಸೋತಿದ್ದರು.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಎಂಎನ್ಎಂ ಅಭ್ಯರ್ಥಿಗಳು 1ಲಕ್ಷಕ್ಕೂ ಅಧಿಕ ಮತಗಳನ್ನು ಪಡೆದಿದ್ದ ಕ್ಷೇತ್ರಗಳಲ್ಲಿ ಕೊಯಮತ್ತೂರು ಕೂಡ ಒಂದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT