ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ: ಕನ್ನಡ ಕಡ್ಡಾಯಕ್ಕೆ ಕರವೇ ಒತ್ತಾಯ

Published : 30 ಸೆಪ್ಟೆಂಬರ್ 2024, 11:33 IST
Last Updated : 30 ಸೆಪ್ಟೆಂಬರ್ 2024, 11:33 IST
ಫಾಲೋ ಮಾಡಿ
Comments

ಬೆಳಗಾವಿ: ಬೆಳಗಾವಿ ಮಹಾನಗರ ಹಾಗೂ ಜಿಲ್ಲೆಯಾದ್ಯಂತ ಅಳವಡಿಸಿರುವ ನಾಮಫಲಕ ಮತ್ತು ಜಾಹೀರಾತು ಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ರಾಣಿ ಚನ್ನಮ್ಮನ ವೃತ್ತದಿಂದ ಮಹಾನಗರ ಪಾಲಿಕೆ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ‘ಬೆಳಗಾವಿಯಲ್ಲಿ ಅಳವಡಿಸಿದ ವಿವಿಧ ನಾಮಫಲಕಗಳಲ್ಲಿ ಕನ್ನಡ ಕಡೆಗಣಿಸಲಾಗುತ್ತಿದೆ. ಸರ್ಕಾರದ ಆದೇಶ ಗಾಳಿಗೆ ತೂರಲಾಗುತ್ತಿದೆ. ಆದರೆ, ಅಧಿಕಾರಿಗಳು ಕ್ರಮ ಜರುಗಿಸುತ್ತಿಲ್ಲ’ ಎಂದು ಆರೋಪಿಸಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ, ‘ರಾಜ್ಯೋತ್ಸವದೊಳಗೆ ಎಲ್ಲ ನಾಮಫಲಕಗಳಲ್ಲೂ ಕನ್ನಡ ರಾರಾಜಿಸಬೇಕು. ನಿರ್ಲಕ್ಷ್ಯ ತೋರುವ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಬೇಕು’ ಎಂದು ಆಗ್ರಹಿಸಿದರು. 

ಸ್ಥಳಕ್ಕೆ ಬಂದ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಮನವಿ ಪಡೆದರು. ಮುಖಂಡರಾದ ಸುರೇಶ ಗವನ್ನವರ, ಗಣೇಶ ರೋಕಡೆ ನೇತೃತ್ವ ವಹಿಸಿದ್ದರು.

ಪ್ರತಿಭಟನೆ ಕಾವು ಅರಿತ ಅಧಿಕಾರಿಗಳು, ರಾಣಿ ಚನ್ನಮ್ಮನ ವೃತ್ತದಲ್ಲಿ ಅಳವಡಿಸಿದ್ದ ಇಂಗ್ಲಿಷ್‌ ಜಾಹೀರಾತು ಫಲಕವನ್ನು ತೆರವುಗೊಳಿಸಿದರು. ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT