ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ವೋಟ್ ಬ್ಯಾಂಕ್ ರಾಜಕಾರಣ..ಮೋದಿ ಹೇಳಿಕೆಗೆ ಕಪಿಲ್ ಸಿಬಲ್ ತಿರುಗೇಟು

Published 6 ಅಕ್ಟೋಬರ್ 2023, 7:49 IST
Last Updated 6 ಅಕ್ಟೋಬರ್ 2023, 7:49 IST
ಅಕ್ಷರ ಗಾತ್ರ

ನವದೆಹಲಿ: ರಾಜಸ್ಥಾನದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಬದಲು ಕಾಂಗ್ರೆಸ್‌ ವೋಟ್ ಬ್ಯಾಂಕ್ ಬಗ್ಗೆ ‌ಚಿಂತಿಸುತ್ತಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಅವರು, 'ಬಿಜೆಪಿ ಮೋದಿ ಅವರನ್ನು ಮೊದಲ ಒಬಿಸಿ (ಇತರ ಹಿಂದುಳಿದ ವರ್ಗ) ಪ್ರಧಾನಿ ಎಂದು ಬಿಂಬಿಸುತ್ತಿರುವುದು ವೋಟ್ ಬ್ಯಾಂಕ್ ರಾಜಕಾರಣವಲ್ಲವೇ?' ಎಂದು ಪ್ರಶ್ನಿಸಿದ್ದಾರೆ.

'ಮೋದಿಜಿ ಕಾಂಗ್ರೆಸ್‌ಗೆ ವೋಟ್ ಬ್ಯಾಂಕ್ ಚಿಂತೆ, ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಅಲ್ಲ. ಅದರೆ ನಿಮ್ಮ ಕಾನೂನು ಎಲ್ಲಿದೆ?, ಇಡಿ ಮತ್ತು ಸಿಬಿಐ ಕಾನೂನುಗಳೇ?, ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ಇದೆಯೇ? ಎಂದು ಕೇಳಿದ್ದಾರೆ.

ಜೋಧ್‌ಪುರದಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 'ಕಾಂಗ್ರೆಸ್ ರಾಜಸ್ಥಾನದ ಯೋಗಕ್ಷೇಮಕ್ಕಿಂತ ತನ್ನ ವೋಟ್ ಬ್ಯಾಂಕ್ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತದೆ. ಕಾನೂನು ಮತ್ತು ಸುವ್ಯವಸ್ಥೆ ಇಂತಹ ಸ್ಥಿತಿಯಲ್ಲಿದ್ದಾಗ ಯಾವುದೇ ಹೂಡಿಕೆ ಸಾಧ್ಯವಿಲ್ಲ. ಇದರಿಂದ ವ್ಯಾಪಾರಕ್ಕೆ ತೊಂದರೆಯಾಗುತ್ತದೆ' ಎಂದು ಹೇಳಿದ್ದರು.

ಇನ್ನು ಮಾಜಿ ಕೇಂದ್ರ ಸಚಿವ ಸಿಬಲ್, ಯುಪಿಎ ಸರ್ಕಾರದ ಅವಧಿಯಲ್ಲಿ 2 ಬಾರಿ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಕಳೆದ ವರ್ಷ ಮೇನಲ್ಲಿ ಕಾಂಗ್ರೆಸ್ ತೊರೆದ ಅವರು ಸಮಾಜವಾದಿ ಪಕ್ಷದ ಬೆಂಬಲದೊಂದಿಗೆ ಸ್ವತಂತ್ರ ಸದಸ್ಯರಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT