ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕರಣ್‌ಪುರ ವಿಧಾನಸಭಾ ಚುನಾವಣೆ: ಸೋತ ಸಚಿವ ಸುರೇಂದ್ರ ಪಾಲ್ ರಾಜೀನಾಮೆ

Published 9 ಜನವರಿ 2024, 3:55 IST
Last Updated 9 ಜನವರಿ 2024, 3:55 IST
ಅಕ್ಷರ ಗಾತ್ರ

ಜೈಪುರ: ಕರಣ್‌ಪುರ ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ರಾಜಸ್ಥಾನದ ಸಚಿವ ಸುರೇಂದ್ರ ಪಾಲ್ ಸಿಂಗ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಸುರೇಂದ್ರ ಪಾಲ್ ಸಿಂಗ್ ವಿರುದ್ಧ 11,283 ಮತಗಳ ಮೂಲಕ ಕಾಂಗ್ರೆಸ್‌ ಅಭ್ಯರ್ಥಿ ರೂಪಿಂದರ್ ಸಿಂಗ್ ಕೂನರ್ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ನಾಮನಿರ್ದೇಶಿತ ಸುರೇಂದ್ರ ಪಾಲ್ ಸಿಂಗ್ ಅವರನ್ನು ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರು ತಮ್ಮ ಸಚಿವ ಸಂಪುಟಕ್ಕೆ ಚುನಾವಣೆಗೂ ಮುಂಚಿತವಾಗಿಯೇ ಸೇರಿಸಿಕೊಂಡಿದ್ದರು. ಕೃಷಿ ಮಾರುಕಟ್ಟೆ ಮಂಡಳಿ, ಇಂದಿರಾ ಗಾಂಧಿ ಕಾಲುವೆ ಇಲಾಖೆ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಇಲಾಖೆ ಖಾತೆಯನ್ನು ನೀಡಲಾಗಿತ್ತು.

ನಿಯಮಗಳ ಪ್ರಕಾರ, ಸುರೇಂದ್ರ ಪಾಲ್ ಸಿಂಗ್ ಅವರು ಸಚಿವರಾಗಿ ಸೇರ್ಪಡೆಗೊಂಡ ನಂತರ ವಿಧಾನಸಭೆಗೆ ಆಯ್ಕೆಯಾಗಲು ಆರು ತಿಂಗಳ ಕಾಲಾವಕಾಶವಿತ್ತು. ‍ಆದರೆ ಚುನಾವಣೆ ಸೋತ ಕಾರಣದಿಂದಾಗಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಕೂನರ್ ಅವರ ಪುತ್ರ ರೂಪಿಂದರ್ ಸಿಂಗ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿತ್ತು. ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಸುರೇಂದ್ರ ಪಾಲ್ ಸಿಂಗ್ ಸ್ಪರ್ಧಿಸಿದ್ದರು.

ಕರಣ್‌ಪುರ ವಿಧಾನಸಭಾ ಕ್ಷೇತ್ರ ಹೊರತುಪಡಿಸಿ, ಇತ್ತೀಚಿಗೆ ನಡೆದಿದ್ದ ಚುನಾವಣೆಯಲ್ಲಿ 199 ವಿಧಾನಸಭಾ ಸ್ಥಾನಗಳ ಪೈಕಿ 115 ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸಿ ಅಧಿಕಾರಕ್ಕೇರಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT