ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕರ್ನಾಟಕ ವಿಧಾನಸಭೆ ಚುನಾವಣೆ: ಎಲ್ಲೆ ಮೀರಿದ ಮಾತು, ಚುನಾವಣಾ ಆಯೋಗ ಕಿವಿಮಾತು

Published 2 ಮೇ 2023, 15:50 IST
Last Updated 2 ಮೇ 2023, 15:50 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯ ಪ್ರಚಾರದ ಗುಣಮಟ್ಟ ಕುಸಿಯುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಚುನಾವಣಾ ಆಯೋಗ, ಎಲ್ಲ ಪಕ್ಷಗಳ ನಾಯಕರು ಮತ್ತು ಅಭ್ಯರ್ಥಿಗಳು ಪ್ರಚಾರದ ವೇಳೆ ಎಚ್ಚರಿಕೆ ಹಾಗೂ ಸಂಯಮದಿಂದ ಹೇಳಿಕೆಗಳನ್ನು ನೀಡಬೇಕು ಎಂದು ಸಲಹೆ ನೀಡಿದೆ. ಚುನಾವಣಾ ವಾತಾವರಣ ಹಾಳು ಮಾಡದಂತೆಯೂ ಕಿವಿಮಾತು ಹೇಳಿದೆ. 

ಪ್ರಧಾನಿ ನರೇಂದ್ರ ಮೋದಿ ವಿಷದ ಹಾವಿದ್ದಂತೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದರು. ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ವಿಷಕನ್ಯೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಟೀಕಿಸಿದ್ದರು. ಕೆಲಸ ಮಾಡದವರು ನಾಲಾಯಕ್‌ ಎಂದು ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ಹೇಳಿದ್ದರು. ಪ್ರಚಾರದ ವೇಳೆ ಇಂತಹ ಹೇಳಿಕೆಗಳು ಹೆಚ್ಚುತ್ತಿರುವುದನ್ನು ಗಮನಿಸಿದ ಆಯೋಗವು, ರಾಜಕೀಯ ಪಕ್ಷಗಳಿಗೆ ಮಂಗಳವಾರ ಕೆಲವೊಂದು ಸಲಹೆಗಳನ್ನು ನೀಡಿದೆ.

‘ಪಕ್ಷಗಳ ಸ್ಟಾರ್ ಪ್ರಚಾರಕರೇ ಇಂತಹ ಹೇಳಿಕೆಗಳನ್ನು ನೀಡುತ್ತಿರುವುದು ಗಮನಕ್ಕೆ ಬಂದಿದೆ. ಈ ಕುರಿತು ದೂರುಗಳು ಬಂದಿವೆ. ಮಾಧ್ಯಮಗಳಲ್ಲಿ ವರದಿಗಳು ‍ಪ್ರಕಟವಾಗಿವೆ’ ಎಂದು ಹೇಳಿರುವ ಆಯೋಗ, ‘ಪಕ್ಷಗಳ ಸ್ಟಾರ್ ಪ್ರಚಾರಕರು ಹಾಗೂ ಅಭ್ಯರ್ಥಿಗಳು ವಿಷಯ ಆಧಾರಿತ ಚರ್ಚೆಗಳನ್ನು ಮಾಡಬೇಕು’ ಎಂದೂ ಸಲಹೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT