ಹೈದರಾಬಾದ್: ಅನುಮತಿ ಇಲ್ಲದೇ ಉಸ್ಮಾನಿಯಾ ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗೆ ಅತಿಕ್ರಮವಾಗಿ ಪ್ರವೇಶಿಸಿದ ಕಾರಣ ಬಿಜೆಪಿ ಸಂಸದ ಹಾಗೂ ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹಾಗೂ ಅವರ ಬೆಂಬಲಿಗರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಗಳವಾರ, ತೆಲಂಗಾಣ ಅಭಿಯಾನದ ಹುತಾತ್ಮರಿಗೆ ನಮನ ಸಲ್ಲಿಸಲು, ಬ್ಯಾರಿಕೇಡ್‌ಗಳನ್ನು ತೆಗೆದು ತೇಜಸ್ವಿ ಸೂರ್ಯ ಕ್ಯಾಂಪಸ್ ಒಳಗೆ ಪ್ರವೇಶಿಸಿದ್ದರು. ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಅವರು ನೀಡಿದ ದೂರಿನ ಅನ್ವಯ, ಭಾರತೀಯ ದಂಡ ಸಂಹಿತೆ ಸೆಕ್ಷನ್ 447ರಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದರು.

‘ಅನುಮತಿ ಇಲ್ಲದೇ ಒಳಪ್ರವೇಶಿಸಿರುವ ಬಿಜೆಪಿ ನಾಯಕ ತೇಜಸ್ವಿ ಸೂರ್ಯ, ಅಲ್ಲಿ ಸಭೆ ನಡೆಸಿದ್ದಾರೆ’ ಎಂದು ರಿಜಿಸ್ಟ್ರಾರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ತೆಲಂಗಾಣ ಪ್ರತ್ಯೇಕ ರಾಜ್ಯದ ಬೇಡಿಕೆ ಸಂದರ್ಭದಲ್ಲಿ ವಿಶ್ವವಿದ್ಯಾಲಯವು ಪ್ರತಿಭಟನೆಯ ಕೇಂದ್ರವಾಗಿತ್ತು. ಡಿ.1ರಂದು ನಡೆಯಲಿರುವ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯ ಪ್ರಚಾರಕ್ಕಾಗಿ ತೇಜಸ್ವಿ ಸೂರ್ಯ ಅಲ್ಲಿಗೆ ಭೇಟಿ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.