ಬೆಂಗಳೂರು: ಕಾವೇರಿ ಕೊಳ್ಳದ ರೈತರ ಹಿತದೃಷ್ಟಿಯಿಂದ ಹೆಚ್ಚುವರಿಯಾಗಿ 70 ಟಿಎಂಸಿ ಅಡಿ ನೀರನ್ನು ರಾಜ್ಯಕ್ಕೆ ನೀಡುವಂತೆ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗುವುದು. ಇದಕ್ಕಾಗಿ ಏ. 27ರಿಂದ 29ರವರೆಗೆ ಕಾವೇರಿ ನದಿ ಪಾತ್ರದಲ್ಲಿ ಪ್ರವಾಸ ಕೈಗೊಂಡು ರೈತರ ಅಭಿಪ್ರಾಯ ಪಡೆಯಲಾಗುವುದು ಎಂದು ಕಾವೇರಿ ನದಿ ರಕ್ಷಣಾ ಸಮಿತಿ ತಿಳಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಎಚ್.ಕೆ. ರಾಮು, ‘ಈ ಬಾರಿ ಬಿಸಿಲು ಹೆಚ್ಚಾಗಿದೆ. ಮುಂಗಾರು ದುರ್ಬಲ ಆಗುವ ಮಾಹಿತಿ ಇದ್ದು, ಕಾವೇರಿ ಕೊಳ್ಳದಲ್ಲಿ ನೀರಿನ ಅಭಾವ ಆಗುವ ಸಾಧ್ಯತೆ ಇದೆ. 2018ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಈಗ ರಾಜ್ಯಕ್ಕೆ 284.75 ಟಿಎಂಸಿ ಅಡಿ ನೀರು ನೀಡುತ್ತಿದ್ದು, ಇದು ಸಾಕಾಗುತ್ತಿಲ್ಲ. ಆದ್ದರಿಂದ ಹೆಚ್ಚುವರಿಯಾಗಿ ನೀರು ನೀಡುವಂತೆ ಅರ್ಜಿ ಸಲ್ಲಿಸಲಾಗುವುದು’ ಎಂದು ಹೇಳಿದರು.

‘ಇದರ ಭಾಗವಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮೂರು ದಿನಗಳ ಪ್ರವಾಸ ಕೈಗೊಂಡು ಜಲಾಶಯಗಳಲ್ಲಿನ ನೀರಿನ ಸ್ಥಿತಿಗತಿ, ರೈತರ ಸಂಕಷ್ಟದ ನೈಜ ಮಾಹಿತಿ ಸಂಗ್ರಹಿಸಲಿದ್ದೇವೆ’ ಎಂದು ತಿಳಿಸಿದರು.

ಏ.27ರಂದು ಭಾಗಮಂಡಲ, ತಲಕಾವೇರಿ, ಹಾರಂಗಿ, ಹೇಮಾವತಿ ಜಲಾಶಯ ವೀಕ್ಷಿಸಲಾಗುತ್ತದೆ. ಏ.28ರಂದು ಕೆಆರ್ಎಸ್ ಜಲಾಶಯ ಪರಿಶೀಲಿಸಿ, ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ನಿವೃತ್ತ ನ್ಯಾಯಮೂರ್ತಿ ಎನ್. ಗೋಪಾಲಗೌಡ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗುವುದು. ಏ.29ರಂದು ಕಬಿನಿ, ನಂಜನಗೂಡು, ತಿ. ನರಸೀಪುರಕ್ಕೆ ತೆರಳಿ ಮೇಕೆದಾಟು ಬಳಿ ಸಭೆ ನಡೆಸಲಾಗುವುದು’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-4-1682515854

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.