ರಾಜ್ಯ, ರಾಷ್ಟ್ರೀಯ, ವಿದೇಶ ವಿದ್ಯಮಾನಗಳಿಗೆ ಸಂಬಂಧಿಸಿದ ಈ ದಿನದ ಟಾಪ್ 10 ಸುದ್ದಿಗಳು

ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ 10ರಿಂದ 14 ಶಾಸಕರು ಸಚಿವರಾಗಿ ಲೋಕಭವನದಲ್ಲಿ ಬುಧವಾರ (ಜೂನ್ 3) ಸಂಜೆ 4.05ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
.ಕರುನಾಡ ಚುಕ್ಕಾಣಿ ಶಿವಕುಮಾರ್ ಕೈಗೆ.
ಸಚಿವರ ಆಯ್ಕೆ ವಿಚಾರವಾಗಿ ಮಾಧ್ಯಮಗಳಲ್ಲಿ ಬರುತ್ತಿರುವ ಹೆಸರುಗಳು ಅಧಿಕೃತವಲ್ಲ. ನಾಳೆ ಬೆಳಗ್ಗೆ 10 ಗಂಟೆ ಅಥವಾ ಮಧ್ಯಾಹ್ನದ ವೇಳೆಗೆ ಹೈಕಮಾಂಡ್ ನಾಯಕರು ಸಚಿವರ ಪಟ್ಟಿ ಬಿಡುಗಡೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
.ಇಂದು ಸಚಿವರ ಪಟ್ಟಿ ಪ್ರಕಟ: ಮಾಧ್ಯಮಗಳಲ್ಲಿನ ಹೆಸರುಗಳು ಅಧಿಕೃತವಲ್ಲ; ಶಿವಕುಮಾರ್.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರನ್ನಾಗಿ ಸಿದ್ದರಾಮಯ್ಯ ಅವರನ್ನು ಮಂಗಳವಾರ ನೇಮಕ ಮಾಡಲಾಗಿದೆ.
.ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಿದ್ಧರಾಮಯ್ಯ ನೇಮಕ.
ಕಿರ್ಗಿಜ್ ಗಣರಾಜ್ಯದಲ್ಲಿ ಬುಧವಾರದಿಂದ ‘ಶಾಂಘೈ ಸಹಕಾರ ಸಂಘ’ದ ಸದಸ್ಯ ರಾಷ್ಟ್ರಗಳ ಶೃಂಗಸಭೆ ಆರಂಭವಾಗಲಿದ್ದು, ಸದಸ್ಯ ರಾಷ್ಟ್ರಗಳ ಕೈಗಾರಿಕಾ ಸಚಿವರ ಮಟ್ಟದ ಸಭೆಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ.
.ಶಾಂಘೈ ಸಹಕಾರ ಸಂಘ ಶೃಂಗ: ಎಚ್ಡಿಕೆ ಭಾಗಿ.
ಒಂದು ಕಾಲದಲ್ಲಿ ಮನೆಗೆಲಸದವಳಾಗಿ ಕೆಲಸ ಮಾಡುತ್ತಿದ್ದ 37 ವರ್ಷದ ಮಹಿಳೆಯೊಬ್ಬರು ಸೋಮವಾರ ಪಶ್ಚಿಮ ಬಂಗಾಳ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
.ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಈಗ ಬಂಗಾಳ ಸರ್ಕಾರದ ಸಚಿವೆ.
ಎಲ್ಲ ಪ್ರಕರಣಗಳಲ್ಲಿ ಅದರಲ್ಲೂ ವಿಶೇಷವಾಗಿ ಮಾದಕವಸ್ತುಗಳನ್ನು ಒಳಗೊಂಡ ಪ್ರಕರಣಗಳಲ್ಲಿ ವೈಯಕ್ತಿಕ ಸ್ವಾತಂತ್ರ್ಯಕ್ಕಿಂತ ದೇಶದ ಸಾರ್ವಭೌಮತೆಯೇ ಮುಖ್ಯವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.
.ವೈಯಕ್ತಿಕ ಸ್ವಾತಂತ್ರ್ಯಕ್ಕಿಂತ ದೇಶದ ಸಾರ್ವಭೌಮತೆಯೇ ಮಿಗಿಲು: ಸುಪ್ರೀಂ ಕೋರ್ಟ್ .
ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ಮಂಗಳವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ, ‘ರಾಜೀನಾಮೆ ನಿರ್ಧಾರವನ್ನು ಮರುಪರಿಶೀಲಿಸಿ’ ಎಂದು ಬಿಜೆಪಿ ಹೈಕಮಾಂಡ್ ಅಣ್ಣಾಮಲೈ ಅವರಿಗೆ ಮನವಿ ಮಾಡಿರುವುದಾಗಿ ಮೂಲಗಳು ತಿಳಿಸಿವೆ.
.ರಾಜೀನಾಮೆ: ಮರುಪರಿಶೀಲಿಸಲು ಅಣ್ಣಾಮಲೈಗೆ ಮನವಿ.

ಕುವೈತ್ ಮತ್ತು ಬಹರೇನ್ನಲ್ಲಿರುವ ಅಮೆರಿಕದ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ ಎಂದು ವರದಿಯಾಗಿದೆ.
.ಕುವೈತ್, ಬಹರೇನ್ ನೆಲೆಗಳ ಮೇಲೆ ಇರಾನ್ ದಾಳಿ: ಅಮೆರಿಕ ಪ್ರತಿದಾಳಿ.
ಅಮೆರಿಕ ಇರಾನ್ನ ಬಂದರುಗಳ ಮೇಲೆ ನೌಕಾ ದಿಗ್ಬಂಧನ ಹೇರಿದ್ದು, ನಿಯಮ ಉಲ್ಲಂಘಿಸಿ ಇರಾನ್ ಪ್ರವೇಶಿಸಲು ಯತ್ನಿಸುತ್ತಿದ್ದ ವಾಣಿಜ್ಯ ತೈಲ ಟ್ಯಾಂಕರ್ ಮೇಲೆ ಅಮೆರಿಕ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ.
.ಇರಾನ್ನ ಖಾರ್ಗ್ ದ್ವೀಪದತ್ತ ಹೊರಟಿದ್ದ ತೈಲ ಟ್ಯಾಂಕರ್ ಮೇಲೆ ಅಮೆರಿಕ ದಾಳಿ.
ಮಹಿಳೆಯರ 1,500 ಮೀ. ಓಟದಲ್ಲಿ ರಾಷ್ಟ್ರೀಯ ದಾಖಲೆ ಹೊಂದಿರುವ ಕೆ.ಎಂ.ದೀಕ್ಷಾ ಅವರು ಉದ್ದೀಪನ ಮದ್ದು ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ.
.ಮಹಿಳೆಯರ 1,500 ಮೀ. ಓಟ: ಡೋಪಿಂಗ್ ಪರೀಕ್ಷೆಯಲ್ಲಿ ಸಿಲುಕಿದ ದೀಕ್ಷಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.