ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ ವಿದ್ಯಮಾನಗಳಿಗೆ ಸಂಬಂಧಿಸಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

'ಅಮೆರಿಕ ಮುಂದಿಟ್ಟಿರುವ ಬೇಡಿಕೆಗಳನ್ನು ನಿಗದಿತ ಗಡುವಿನೊಳಗೆ ಒಪ್ಪದಿದ್ದರೆ ಇರಾನ್ ನಾಗರಿಕತೆಯ ಸರ್ವನಾಶವಾಗಲಿದೆ' ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಎಚ್ಚರಿಸಿದ್ದಾರೆ.
.ಇಂದು ರಾತ್ರಿಯೇ ಇರಾನ್ ನಾಗರಿಕತೆಯ ಸರ್ವನಾಶ: ಮತ್ತೊಮ್ಮೆ ಟ್ರಂಪ್ ಬೆದರಿಕೆ.
ಎರಡು ಸೇತುವೆ ಸಹಿತ ಪ್ರಮುಖ ಮೂಲಭೂತ ಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ಹಾಗೂ ಇಸ್ರೇಲ್ ಮಂಗಳವಾರ ದಾಳಿ ನಡೆಸಿದೆ ಎಂದು ಇರಾನ್ ಹೇಳಿದೆ. ಇರಾನ್ನ ಪ್ರಮುಖ ತೈಲ ರಫ್ತು ಕೇಂದ್ರ ಖಾರ್ಗ್ ದ್ವೀಪದ ಮೇಲೂ ದಾಳಿ ನಡೆದಿದೆ ಎಂದು ಸ್ಥಳೀಯ ಮಾಧ್ಯಮ ‘ಮೆಹರ್’ ಸುದ್ದಿ ಸಂಸ್ಥೆ ವರದಿ ಮಾಡಿದೆ.
.ಇರಾನ್ನ ಖಾರ್ಗ್ ದ್ವೀಪದ ಮೇಲೆ ದಾಳಿ: ಟೆಹರಾನ್ನಲ್ಲೂ ಸ್ಫೋಟದ ಸದ್ದು.
ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ ಅಲಿಯಾಸ್ ಆರ್.ಡಿ.ಪಾಟೀಲನನ್ನು ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲು ಅನುಮತಿ ನೀಡಿದ್ದ ಜಿಲ್ಲಾ ಕೋರ್ಟ್ ಆದೇಶವನ್ನು ಕರ್ನಾಟಕ ಹೈಕೋರ್ಟ್ನ ಕಲಬುರಗಿ ಪೀಠವು ರದ್ದುಗೊಳಿಸಿದೆ.
.ಪಿಎಸ್ಐ ಹಗರಣದ ಆರೋಪಿ ಆರ್.ಡಿ.ಪಾಟೀಲ ಸ್ಥಳಾಂತರ ಹೈಕೋರ್ಟ್ನಿಂದ ರದ್ದು.
ನಿರ್ಮಿತಿ ಕೇಂದ್ರದಲ್ಲಿ ಅಕೌಂಟೆಂಟ್ ಆಗಿ ಕಾರ್ಯ ನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದಿರುವ ಸುಶೀಲಮ್ಮ ಅವರ ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಈ ವೇಳೆ ಪೊಲೀಸರು ₹ 7.90 ಕೋಟಿ ಮೌಲ್ಯದ ಆಸ್ತಿ ಪತ್ತೆ ಹಚ್ಚಿದ್ದಾರೆ.
.ಚಿತ್ರದುರ್ಗ: ನಿವೃತ್ತ ಅಕೌಂಟೆಂಟ್ ಬಳಿ ₹ 8 ಕೋಟಿ ಮೌಲ್ಯದ ಆಸ್ತಿ ಪತ್ತೆ.
ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ನನಗೆ ದೈಹಿಕವಾಗಿ, ಮಾನಸಿಕವಾಗಿ ಹಾಗೂ ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಮಹಿಳೆಯೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ಮಂಗಳವಾರ ದೂರು ನೀಡಿದ್ದಾರೆ.
.ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ.
ಈ ತಿಂಗಳು ನಡೆಯುವ ಐದು ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಏಪ್ರಿಲ್ 9ರ ಬೆಳಿಗ್ಗೆ 7ಗಂಟೆಯಿಂದ ಏಪ್ರಿಲ್ 29ರ ಸಂಜೆ 6.30ರ ವರೆಗೆ ಮತಗಟ್ಟೆ ಸಮೀಕ್ಷೆಗಳನ್ನು ನಡೆಸುವಂತಿಲ್ಲ, ಪ್ರಸಾರ ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.
.ಏ. 9ರಿಂದ 29ರವರೆಗೆ ಮತಗಟ್ಟೆ ಸಮೀಕ್ಷೆ ಪ್ರಸಾರಕ್ಕೆ ಚುನಾವಣಾ ಆಯೋಗ ನಿರ್ಬಂಧ.
ಪಂಚರಾಜ್ಯ ಚುನಾವಣೆಯ ನಂತರ ಚುನಾವಣಾ ಆಯೋಗವು ಮೂರನೇ ಹಾಗೂ ಅಂತಿಮ ಸುತ್ತಿನ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ(ಎಸ್ಐಆರ್) ಮುಂದಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
.ಪಂಚರಾಜ್ಯ ಚುನಾವಣೆಯ ನಂತರ ಕರ್ನಾಟಕ ಸೇರಿದಂತೆ 17 ರಾಜ್ಯಗಳಲ್ಲಿ ಎಸ್ಐಆರ್ ಆರಂಭ.
ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ದೆಹಲಿಯ ನಿವಾಸದ ಮೇಲೆ ಅಸ್ಸಾಂ ಪೊಲೀಸರು ದಾಳಿ ನಡೆಸಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಹಾಗೂ ಅವರ ಕುಟುಂಬದ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ.
.ಕಾಂಗ್ರೆಸ್ ನಾಯಕ ಪವನ್ ಖೇರಾ ನಿವಾಸದ ಮೇಲೆ ಅಸ್ಸಾಂ ಪೊಲೀಸರಿಂದ ದಾಳಿ.
ಅಲ್ಲು ಅರ್ಜುನ್ ನಟನೆಯ, ಅಟ್ಲೀ ಅವರ ನಿರ್ದೇಶನದಲ್ಲಿ ಮೂಡಿ ಬರಲಿರುವ ಸಾಂದರ್ಭಿಕವಾಗಿ ‘AA22xA6’ ಎಂದು ಶೀರ್ಷಿಕೆ ಹೊಂದಿರುವ ಸಿನಿಮಾದ ಅಸಲಿ ಶೀರ್ಷಿಕೆ ನಾಳೆ (ಏಪ್ರಿಲ್ 8) ರಂದು ಘೋಷಣೆಯಾಗಲಿದೆ.
.ಅಲ್ಲು ಅರ್ಜುನ್ ಹೊಸ ಸಿನಿಮಾ: ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಶುಭ ಸುದ್ದಿ.
ಬರ್ಸಾಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ ರಾಯಲ್ಸ್ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ.

ಮಳೆಯಿಂದಾಗಿ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯ 19ನೇ ಆವೃತ್ತಿಯ 13ನೇ ಪಂದ್ಯದ ಟಾಸ್ ವಿಳಂಬವಾಗಿದೆ.
.IPL 2026: ಮುಂಬೈ vs ರಾಜಸ್ಥಾನ ಪಂದ್ಯಕ್ಕೆ ಮಳೆ ಅಡ್ಡಿ; ಟಾಸ್ ವಿಳಂಬ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.