ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

News Express | ಜಗದೀಶ್ ಶೆಟ್ಟರ್‌ಗೆ ಐ.ಟಿ, ಇ.ಡಿ ಭಯ ತೋರಿಸಿರಬಹುದು: ಪ್ರಿಯಾಂಕ್

Published 26 ಜನವರಿ 2024, 13:50 IST
Last Updated 26 ಜನವರಿ 2024, 13:50 IST
ಅಕ್ಷರ ಗಾತ್ರ

ಕೇಂದ್ರ ಸರ್ಕಾರ ಜಗದೀಶ್ ಶೆಟ್ಟರ್ ಅವರಿಗೆ ಐ.ಟಿ, ಇ.ಡಿ ಭಯ ತೋರಿಸಿದ್ದರಿಂದ ಅವರು ದಿಢೀರ್ ಆಗಿ ಬಿಜೆಪಿ ಸೇರ್ಪಡೆಯಾಗಿರಬಹುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು. ಕಲಬುರಗಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷಗಳ ನಾಯಕರನ್ನು ಹಣಿಯಲು ಕೇಂದ್ರದ ನರೇಂದ್ರ ಮೋದಿ ಸರ್ಕಾರ ಐ.ಟಿ, ಇ.ಡಿ, ಸಿಬಿಐಗಳನ್ನು ಅಸ್ತ್ರವಾಗಿ ಬಳಸುತ್ತಿವೆ. ಶೆಟ್ಟರ್ ಅವರನ್ನು ಸೆಳೆಯಲು ಇದೇ ತಂತ್ರ ಅನುಸರಿಸಿರಬಹುದು. ಶೆಟ್ಟರ್ ಅವರನ್ನು ನಮ್ಮ ಪಕ್ಷ ಗೌರವಯುತವಾಗಿಯೇ ನಡೆಸಿಕೊಂಡಿತ್ತು. ಈ ಬಗ್ಗೆ ಅವರೇ ಹೇಳಿಕೆ ನೀಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡರೂ ವಿಧಾನಪರಿಷತ್ ಸದಸ್ಯನ ಸ್ಥಾನವನ್ನು ನೀಡಲಾಗಿತ್ತು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT