ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕದಲ್ಲಿ ಬರ ಇದ್ದರೂ ಸಹಾಯಹಸ್ತ ಚಾಚದ ಕೇಂದ್ರ ಸರ್ಕಾರ:ಜೈರಾಮ್‌ ರಮೇಶ್‌ ಆರೋಪ

Published 18 ಮಾರ್ಚ್ 2024, 5:41 IST
Last Updated 18 ಮಾರ್ಚ್ 2024, 5:41 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದ ಹೆಚ್ಚಿನ ಪ್ರದೇಶದಲ್ಲಿ ನೀರಿನ ಅಭಾವ ಎದುರಾಗಿದೆ, ತೀವ್ರ ಬರ ಪರಿಸ್ಥಿತಿ ಇದೆ. ಆದರೂ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನರಿಗೆ ಸಹಾಯ ಮಾಡಲು ನಿರಾಕರಿಸಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಆರೋಪಿಸಿದ್ದಾರೆ. 

‘ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶಿವಮೊಗ್ಗದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಅವರು ತಮ್ಮ ಭಾಷಣದಲ್ಲಿ ರಾಜ್ಯದ ಕೆಲವು ಪ್ರಮುಖ ಸಮಸ್ಯೆಗಳನ್ನು ತಿಳಿಸುತ್ತಾರೆ ಎಂದು ನಾವು ಭಾವಿಸುತ್ತೇವೆ’ ಎಂದು ಜೈರಾಮ್‌ ರಮೇಶ್‌ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕ ರಾಜ್ಯದ 236 ತಾಲೂಕುಗಳ ಪೈಕಿ 223 ತಾಲೂಕುಗಳು ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ತೀವ್ರ ನೀರಿನ ಬಿಕ್ಕಟ್ಟಿನಿಂದ  ತತ್ತರಿಸುತ್ತಿದೆ. ರಾಜ್ಯ ಸರ್ಕಾರವು ಬರ ಪರಿಹಾರಕ್ಕಾಗಿ ₹18,172 ಕೋಟಿ ಹಣವನ್ನು ಬಿಡುಗಡೆ ಮಾಡುವಂತೆ ಮೋದಿ ಸರ್ಕಾರಕ್ಕೆ ಮನವಿ ಮಾಡಿದೆ. ಮೋದಿ ಸರ್ಕಾರ ಕರ್ನಾಟಕದ ಜನರಿಗೆ ಸಹಾಯ ಮಾಡಲು ಏಕೆ ನಿರಾಕರಿಸಿದೆ’ ಎಂದು ಪ್ರಶ್ನಿಸಿದ್ದಾರೆ.

ಗ್ರಾಮೀಣ ಆರ್ಥಿಕತೆಯ ಮೇಲಿನ ಒತ್ತಡ ನಿವಾರಣೆಗೆ ನೆರವಾಗಲೆಂದು ಕರ್ನಾಟಕ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಜಿಎನ್‌ಇಆರ್‌ಇಜಿಎಸ್) ಅಡಿಯಲ್ಲಿ 100 ರಿಂದ 150 ರವರೆಗೆ ಕೆಲಸದ ದಿನಗಳ ಸಂಖ್ಯೆಯನ್ನು ಹೆಚ್ಚಿಸಲು ಪ್ರಯತ್ನಿಸಿದೆ. ಆದರೆ, ಮೋದಿ ಸರ್ಕಾರವು ಯೋಜನೆಯ ವಿಸ್ತರಣೆಯನ್ನು ಅನುಮೋದಿಸಲು ವಿಫಲವಾಗಿದೆ. ಅಲ್ಲದೆ ₹1600 ಕೋಟಿ ವೇತನ ಪಾವತಿಗೆ ಬಿಡುಗಡೆ ಮಾಡಲು ವಿಫಲವಾಗಿದೆ ಜೈರಾಮ್‌ ರಮೇಶ್‌ ಬಿಜೆಪಿಯನ್ನು ಕುಟುಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT