ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ(22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್ಫ್ರಾನ್ಸಿಸ್ಕೊದಲ್ಲಿರುವ ಭಾರತದ ರಾಯಭಾರ ಕಚೇರಿ ಎಕ್ಸ್ ಖಾತೆಯ ಮೂಲಕ ಖಚಿತಪಡಿಸಿದೆ.

ಕ್ಯಾಲಿಫೋರ್ನಿಯಾ ವಿವಿಯಲ್ಲಿ ಎಂ.ಎಸ್ಸಿ ವ್ಯಾಸಂಗ ಮಾಡುತ್ತಿದ್ದ ಸಾಕೇತ್, ಫೆ. 9ರಿಂದ ಕಾಣೆಯಾಗಿದ್ದರು. ಇದರ ಬೆನ್ನಲ್ಲೇ, ಸಾಕೇತ್ ಅವರ ಪಾಸ್ಪೋರ್ಟ್ ಮತ್ತು ಲ್ಯಾಪ್ಟಾಪ್ ಇದ್ದ ಬ್ಯಾಗ್ ಪಾರ್ಕ್ ಹಿಲ್ ನೈಬರ್ಹುಡ್ ನಿವಾಸದ ಬಳಿ ಪತ್ತೆಯಾಗಿದೆ ಎಂದು ಬರ್ಕ್ಲಿ ಸ್ಕ್ಯಾನರ್ ನ್ಯೂಸ್ ಪೋರ್ಟಲ್ ವರದಿ ಮಾಡಿತ್ತು.

’ಸ್ಥಳೀಯ ಆಡಳಿತದೊಂದಿಗೆ ಸಂವಹನ ಸಾಧಿಸಿ, ಸಾಕೇತ್ ಮೃತದೇಹವನ್ನು ಆದಷ್ಟು ಬೇಗ ಭಾರತಕ್ಕೆ ಕಳುಹಿಸಲು ಬೇಕಿರುವ ಎಲ್ಲ ನೆರವು ನೀಡುವುದರ ಜತೆಗೆ, ನೊಂದಿರುವ ಅವರ ಕುಟುಂಬದ ಜತೆಗೆ ರಾಯಭಾರ ಕಚೇರಿ ನಿಲ್ಲಲಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.