ರಾಜ್ಯ, ರಾಷ್ಟ್ರೀಯ, ವಿದೇಶ, ವಾಣಿಜ್ಯ ಹಾಗೂ ಕ್ರೀಡೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ...

ಬೆಂಗಳೂರು: ಡೀಸೆಲ್ ದರ ಏರಿಕೆ ಮತ್ತು ಇತರ ಕಾರಣಗಳಿಂದಾಗಿ ಶುಕ್ರವಾರ ರಾತ್ರಿ 12ರಿಂದ ಜಾರಿಗೆ ಬರುವಂತೆ ಶೇ 10ರಿಂದ ಶೇ 30ರವರೆಗೆ ಟಿಕೆಟ್ ದರ ಹೆಚ್ಚಳ ಮಾಡಲು ಮಾಡಲು ಬಸ್ ಮಾಲೀಕರು ನಿರ್ಧರಿಸಿದ್ದಾರೆ.

ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

ನವದೆಹಲಿ: ನೈರುತ್ಯ ಮುಂಗಾರು ಮಾರುತಗಳು ಮೇ 26ರಂದು ಕೇರಳಂ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಮುನ್ಸೂಚನೆ ನೀಡಿದೆ.

ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

ಬೆಂಗಳೂರು: ಇಂಧನ ದರ ಏರಿಕೆಯು ಗಿಗ್ ಕಾರ್ಮಿಕರ ಜೀವನೋಪಾಯದ ಮೇಲೆ ಪರಿಣಾಮ ಬೀರುತ್ತಿದೆ. ಎಲ್ಪಿಜಿ ಸಿಲಿಂಡರ್ ದರ ಏರಿಕೆಯಾಗಿ ಆನ್ಲೈನ್ ಪ್ಲ್ಯಾಟ್ಫಾರ್ಮ್ ಬಳಸಿ ಆಹಾರ ತರಿಸುವವರ ಪ್ರಮಾಣ ಒಂದೆಡೆ ಕಡಿಮೆಯಾಗಿದ್ದರೆ, ಪೆಟ್ರೊಲ್ ದರ ಹೆಚ್ಚಳವಾಗಿ ಪೂರೈಕೆ ವೆಚ್ಚ ಅಧಿಕಗೊಂಡಿದೆ.

ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

ಕೋಲ್ಕತ್ತ: ಯಾರಾದರೂ ಪಕ್ಷ ಬಿಟ್ಟು ಹೋಗಲು ಬಯಸಿದರೆ ಅವರು ಹೋಗಬಹುದು. ನಾವು ಯಾರನ್ನೂ ತಡೆಯುವುದಿಲ್ಲ ಎಂದು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಶನಿವಾರ ಹೇಳಿದ್ದಾರೆ.

ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

ಪುಣೆ/ನಾಗ್ಪುರ: ವೈದ್ಯಕೀಯ ಚಿಕಿತ್ಸೆಗೆ ಹಣ ಭರಿಸಲು ಸಾಧ್ಯವಾಗದ ಕಾರಣ ಆಸ್ಪತ್ರೆಯೊಂದರಲ್ಲಿ ಕಚ್ಚಾ ಬಾಂಬ್ (ಐಇಡಿ) ಇಟ್ಟಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಇದರಲ್ಲಿ ಯಾವುದೇ ಭಯೋತ್ಪಾದನಾ ಕೃತ್ಯದ ಉದ್ದೇಶವಿರಲಿಲ್ಲ ಎಂದು ಪುಣೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ತಿಳಿಸಿದ್ದಾರೆ.

ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಿರ್ಧಾರವನ್ನು ಕೇಂದ್ರ ಸರ್ಕಾರ ತಕ್ಷಣವೇ ಹಿಂಪಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.

ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

ನವದೆಹಲಿ: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರನ್ನು ಶುಕ್ರವಾರ ಇಲ್ಲಿ ಭೇಟಿ ಮಾಡಿ ಸಮಾಲೋಚಿಸಿದರು.

ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

ತೈಪೆ: ಅಮೆರಿಕದೊಂದಿಗಿನ ರಕ್ಷಣಾ ವ್ಯಾಪಾರವು ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ ಎಂದು ತೈವಾನ್ ಉಪ ವಿದೇಶಾಂಗ ಸಚಿವ ಚೆನ್ ಮಿಂಗ್-ಚಿ ಅವರು ಶನಿವಾರ(ಮೇ 16) ಹೇಳಿದ್ದಾರೆ.

ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

ನವದೆಹಲಿ (ಪಿಟಿಐ): ಏಪ್ರಿಲ್ ತಿಂಗಳಿನಲ್ಲಿ ದೇಶದಿಂದ ₹4.17 ಲಕ್ಷ ಕೋಟಿ (43.56 ಬಿಲಿಯನ್ ಡಾಲರ್) ಮೌಲ್ಯದ ಸರಕು ಮತ್ತು ಸೇವೆಗಳು ರಫ್ತಾಗಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ರಫ್ತು ಪ್ರಮಾಣವು ಶೇ 13.78ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯದ ಅಂಕಿ–ಅಂಶಗಳು ಶುಕ್ರವಾರ ತಿಳಿಸಿದೆ.

ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

ಲಖನೌ: ಆರಂಭಿಕ ಆಟಗಾರ ಮಿಚೆಲ್ ಮಾರ್ಷ್ (90;38ಎ) ಅವರು ಅಲ್ಪಅಂತರದಲ್ಲಿ ಶತಕ ತಪ್ಪಿಸಿಕೊಂಡರು. ಆದರೆ, ಅವರ ಮಿಂಚಿನ ಬ್ಯಾಟಿಂಗ್ನಿಂದಾಗಿ ಲಖನೌ ಸೂಪರ್ ಜೈಂಟ್ಸ್ ತಂಡವು ಶುಕ್ರವಾರ ನಡೆದ ಐಪಿಎಲ್ ಪಂದ್ಯದಲ್ಲಿ ಏಳು ವಿಕೆಟ್ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ನಿರಾಯಾಸವಾಗಿ ಮಣಿಸಿತು.

ಪೂರ್ತಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.