ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ಣಿ ಸೇನಾ ನಾಯಕನ ಸಹೋದರ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆ

Last Updated 21 ಏಪ್ರಿಲ್ 2023, 2:39 IST
ಅಕ್ಷರ ಗಾತ್ರ

ಗುರುಗ್ರಾಮ್(ಹರಿಯಾಣ): ಬಲಪಂಥೀಯ ಸಂಘಟನೆ ಕರ್ಣಿ ಸೇನಾ ನಾಯಕ ಸೂರಜ್‌ಪಾಲ್ ಅಮ್ಮು ಅವರ ಸಹೋದರ ಸೊಹ್ನಾದ ಹೋಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತನನ್ನು ನೈನ್‌ಪಾಲ್ (48) ಎಂದು ಗುರುತಿಸಲಾಗಿದೆ.

ಬುಧವಾರ ಸಂಜೆ ಹೋಟೆಲ್‌ ಕೋಣೆಯ ಸ್ನಾನಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಆತನ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ನೈನ್‌ಪಾಲ್‌ ಬಹಳ ಸಮಯದಿಂದ ಅನಾರೋಗದಿಂದ ಬಳಲುತ್ತಿದ್ದರು. ಒಂದು ವಾರ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದೇವು. ಅವರ ಆರೋಗ್ಯ ಸುಧಾರಿಸಿದ ನಂತರ ಅವರನ್ನು ಮನೆಗೆ ಕರೆ ತರಲಾಯಿತು. ಆದರೆ ಮನೆಯಲ್ಲಿ ಎಸಿಯಲ್ಲಿ ದೋಷ ಕಾಣಿಸಿದ ಕಾರಣ ಅವರನ್ನು ಸಮೀಪವಿರುವ ಹೋಟೆಲ್‌ಗೆ ಸ್ಥಳಾಂತರಿಸಲಾಯಿತು. ಆದರೆ ನೈನ್‌ಪಾಲ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸೂರಜ್‌ಪಾಲ್ ಅಮ್ಮು ಅವರ ಆಪ್ತ ಸ್ನೇಹಿತರೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ.

ಮೃತ ದೇಹವನ್ನು ಗುರುವಾರ ಅಂತ್ಯಸಂಸ್ಕಾರ ಮಾಡಲಾಗಿದೆ.

2021ರಲ್ಲಿ, ಅಮ್ಮು ಅವರ ಹಿರಿಯ ಮಗ ಅನಿರುದ್ಧ್ ರಾಘವ್ ಗಾಜಿಯಾಬಾದ್‌ನ ಫ್ಲಾಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದರು.

ಹರಿಯಾಣದಲ್ಲಿ 2013ರಲ್ಲಿ ಬಿಜೆಪಿ ವಕ್ತಾರರಾಗಿದ್ದ ಸೂರಜ್‌ಪಾಲ್ ಅಮ್ಮು, 2014 ರಿಂದ 2019 ರವರೆಗೆ ಪಕ್ಷದ ಮಾಧ್ಯಮ ಸಂಯೋಜಕರಾಗಿ ಕಾರ್ಯನಿರ್ವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT