ನವದೆಹಲಿ: ಕರೂರು ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧ್ಯಕ್ಷ, ನಟ ವಿಜಯ್ ಅವರು ಸೋಮವಾರ ಕೇಂದ್ರಿಯ ತನಿಖಾ ಸಮಿತಿ (ಸಿಬಿಐ)ಯ ಕೇಂದ್ರ ಕಚೇರಿಯ ಮುಂದೆ ವಿಚಾರಣೆಗೆ ಹಾಜರಾದರು.

ಕಳೆದ ವರ್ಷ ಸೆಪ್ಟೆಂಬರ್ 27ರಂದು ತಮಿಳುನಾಡಿನ ಕರೂರು ಜಿಲ್ಲೆಯಲ್ಲಿ ನಟ ವಿಜಯ್ ಅವರು ಭಾಗವಹಿಸಿದ್ದ ರ್ಯಾಲಿಯಲ್ಲಿ ಕಾಲ್ತುಳಿತ ಉಂಟಾಗಿ 41 ಮಂದಿ ಮೃತಪಟ್ಟು, 60 ಮಂದಿ ಗಾಯಗೊಂಡಿದ್ದರು.
.ಟಿವಿಕೆ ಮಾನ್ಯತೆ ಪಡೆದ ರಾಜಕೀಯ ಪಕ್ಷವಲ್ಲ: ಮದ್ರಾಸ್ ಹೈಕೋರ್ಟ್ಗೆ ಚುನಾವಣಾ ಆಯೋಗ.ಆರಂಭದಲ್ಲೇ ವಿಘ್ನ: ದಳಪತಿ ವಿಜಯ್ ನಟನೆಯ ಜನ ನಾಯಗನ್ ಬಿಡುಗಡೆ ದಿನಾಂಕ ಮುಂದೂಡಿಕೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆಯ ಹಲವು ಪದಾಧಿಕಾರಿಗಳನ್ನು ಸಿಬಿಐ ಅಧಿಕಾರಿಗಳು ಈಗಾಗಲೇ ಪ್ರಶ್ನಿಸಿದ್ದಾರೆ. ದೋಷಾರೋಪ ಪಟ್ಟಿ ಸಲ್ಲಿಕೆಗೂ ಮುನ್ನ ಸಿಬಿಐ ಅಧಿಕಾರಿಗಳು ವಿಜಯ್ ಅವರನ್ನು ಪ್ರಶ್ನಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಮಿಳುನಾಡು ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡ (ಎಸ್ಐಟಿ) ಈ ಪ್ರಕರಣದ ತನಿಖೆ ನಡೆಸುತ್ತಿತ್ತು. ಸುಪ್ರೀಂ ಕೋರ್ಟ್ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ಆದೇಶ ಹೊರಡಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.