ಚೆನ್ನೈ: ಕರೂರು ಕಾಲ್ತುಳಿತ ಪ್ರಕರಣದ ತನಿಖೆಯ ಭಾಗವಾಗಿ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ, ನಟ ವಿಜಯ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ನೋಟಿಸ್ ನೀಡಿದೆ ಎಂದು ವರದಿಯಾಗಿದೆ.

2025ರ ಸೆ.27ರಂದು ಕರೂರಿನಲ್ಲಿ ನಡೆದ ಟಿವಿಕೆ ಪಕ್ಷದ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನ ಮೃತಪಟ್ಟಿದ್ದರು. ಈ ಘಟನೆ ರಾಜಕೀಯ ಕೋಲಾಹಲಕ್ಕೆ ಕಾರಣವಾದ ಬಳಿಕ ತಮಿಳುನಾಡು ಪೊಲೀಸರು ಕೈಗೆತ್ತಿಕೊಂಡಿದ್ದ ತನಿಖೆಯನ್ನು ಸುಪ್ರೀಂ ಕೋರ್ಟ್ ಸಿಬಿಐಗೆ ಹಸ್ತಾಂತರಿಸಿತ್ತು.

ಪ್ರಕರಣ ಸಂಬಂಧ ಟಿವಿಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಎನ್. ಆನಂದ್, ಪಕ್ಷದ ಕಾರ್ಯತಂತ್ರ ಪ್ರಧಾನ ಕಾರ್ಯದರ್ಶಿ ಆಧಾವ್ ಅರ್ಜುನ ಸೇರಿದಂತೆ ಪಕ್ಷದ ಹಲವು ಹಿರಿಯ ಪದಾಧಿಕಾರಿಗಳು ನವೆಂಬರ್ 24ರಂದು ಸಿಬಿಐ ವಿಚಾರಣೆಗೆ ಹಾಜರಾಗಿದ್ದರು.

ಚೆನ್ನೈನಲ್ಲಿರುವ ಟಿವಿಕೆ ಕೇಂದ್ರ ಕಚೇರಿಗೂ ಸಿಬಿಐ ಅಧಿಕಾರಿಗಳು ಇತ್ತೀಚೆಗೆ ಭೇಟಿ ನೀಡಿ ಕೆಲವು ದಾಖಲೆ ಹಾಗೂ ವಿಜಯ್ ಅವರು ರ್ಯಾಲಿ ದಿನದಂದು ಸಂಚರಿಸಿದ ಬಸ್ನ ಸಿಸಿಟಿವಿ ದೃಶ್ಯಾವಳಿಗಳನ್ನೂ ಪರಿಶೀಲಿಸಿದ್ದರು.

ನಟ ವಿಜಯ್ ಅವರು ಮತ್ತೆ ಚುನಾವಣಾ ಪ್ರಚಾರ ಆರಂಭಿಸುತ್ತಿದ್ದಂತೆಯೇ ಈ ಬೆಳವಣಿಗೆ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.