ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣದಲ್ಲಿ ಎಸ್ಐಟಿ ರಚನೆಗೆ ಮದ್ರಾಸ್ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ, ನಟ ವಿಜಯ್ ನೇತೃತ್ವದ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಆದೇಶವನ್ನು ಕಾದಿರಿಸಿದೆ.

ಟಿವಿಕೆ ಪಕ್ಷದ ಅಧ್ಯಕ್ಷ, ನಟ ವಿಜಯ್ ಸೆಪ್ಟೆಂಬರ್ 27ರಂದು ಕರೂರಿನಲ್ಲಿ ರ್ಯಾಲಿ ನಡೆಸಿದ್ದ ವೇಳೆ ಕಾಲ್ತುಳಿತ ಸಂಭವಿಸಿತ್ತು. ಘಟನೆಯಲ್ಲಿ 41 ಮಂದಿ ಮೃತಪಟ್ಟಿದ್ದರು.

ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿ ಬಿಜೆಪಿ ನಾಯಕಿ ಉಮಾ ಆನಂದನ್ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ತನಿಖೆಯನ್ನು ಸಿಬಿಐಗೆ ವಹಿಸಲು ನಿರಾಕರಿಸಿತ್ತು.

ಶುಕ್ರವಾರ ಅರ್ಜಿಯ ವಿಚಾರಣೆ ನಡೆಸಿದ ಜೆ.ಕೆ ಮಹೇಶ್ವರಿ ಮತ್ತು ಎನ್.ವಿ. ಅಂಜಾರಿಯಾ ಅವರ ಪೀಠವು, ದುರಂತದಲ್ಲಿ ಬಲಿಯಾದವರು, ತಮಿಳುನಾಡು ಸರ್ಕಾರ ಮತ್ತು ಟಿವಿಕೆ ಪಕ್ಷದ ಪರವಾಗಿ ಹಾಜರಾದ ವಕೀಲರ ವಾದವನ್ನು ಆಲಿಸಿತು.

ತಮಿಳುನಾಡಿನ ಬಿಜೆಪಿ ಮುಖಂಡ ಜಿ.ಎಸ್. ಮಣಿ ಕೂಡ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್ನಲ್ಲಿ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ.

ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ತನಿಖೆ ನಡೆಸಬೇಕೆಂದು ಟಿವಿಕೆ ಆಗ್ರಹಿಸಿದೆ. ‘ಹೈಕೋರ್ಟ್ ರಚಿಸಿರುವ ಎಸ್ಐಟಿಯಲ್ಲಿ ತಮಿಳುನಾಡಿನ ಪೊಲೀಸ್ ಅಧಿಕಾರಿಗಳು ಮಾತ್ರ ಇದ್ದಾರೆ. ಇವರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ’ ಎಂದು ಆಕ್ಷೇಪ ವ್ಯಕ್ತಪಡಿಸಿದೆ.
.ಕರೂರು ಕಾಲ್ತುಳಿತ: ಎಸ್ಐಟಿ ರಚನೆ ಪ್ರಶ್ನಿಸಿ ಟಿವಿಕೆ ಪಕ್ಷ ಸುಪ್ರೀಂ ಕೋರ್ಟ್ಗೆ.ಕರೂರು ಕಾಲ್ತುಳಿತ ದುರಂತ: TVK ಇಬ್ಬರು ಕಾರ್ಯದರ್ಶಿಗಳಿಗೆ 14 ದಿನ ನ್ಯಾಯಾಂಗ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.