ಚೆನ್ನೈ: ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ನಟ ವಿಜಯ್ ಅವರು ಭಾನುವಾರ ಕಾಂಚೀಪುರಂ ಜಿಲ್ಲೆಯ ಒಳಾಂಗಣ ಕ್ರೀಡಾಂಗಣದಲ್ಲಿ ತಮ್ಮ ಚುನಾವಣಾ ರ್ಯಾಲಿಯನ್ನು ಪುನರಾರಂಭಿಸಲಿದ್ದಾರೆ.

ಕರೂರು ಕಾಲ್ತುಳಿತದ ಬಳಿಕ ಸ್ಥಗಿತಗೊಂಡಿದ್ದ ಚುನಾವಣಾ ಪ್ರಚಾರ ಮತ್ತೆ ಆರಂಭವಾಗಲಿದೆ. ಸುಮಾರು 2 ತಿಂಗಳ ನಂತರ ವಿಜಯ್ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮ ಸುಗಮವಾಗಿ ನಡೆಯಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕಾಂಚೀಪುರಂ ಜಿಲ್ಲೆಯ ಸುಂಗುವರ್ಚಟ್ಟಿರಂನಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಸುಮಾರು 1,500 ಜನರಿಗೆ ಕ್ಯೂಆರ್-ಆಧಾರಿತ ಪಾಸ್ಗಳನ್ನು ನೀಡಲಾಗಿದೆ. ಪಾಸ್ ಹೊಂದಿದವರಿಗೆ ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದೆ.

ಜನಸಂದಣಿಯನ್ನು ನಿರ್ವಹಿಸಲು ಪಕ್ಷದ ಕಾರ್ಯಕರ್ತರು ಸ್ಥಳದಲ್ಲಿ ಹಾಜರಿರುತ್ತಾರೆ. ಕಾರ್ಯಕರ್ತರಿಗೆ ನಿವೃತ್ತ ಪೊಲೀಸ್ ಅಧಿಕಾರಿಗಳು ತರಬೇತಿ ನೀಡಿದ್ದಾರೆ. ಹಲವು ಖಾಸಗಿ ಭದ್ರತಾ ಸಂಸ್ಥೆಗಳು ಸಹ ಸ್ಥಳದಲ್ಲಿ ಭದ್ರತೆಯನ್ನು ಒದಗಿಸಲಿವೆ. ಬೌನ್ಸರ್ಗಳು ಹಾಜರಿರುತ್ತಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕರೂರಿನಲ್ಲಿ ಸೆ.27ರಂದು ಸಂಭವಿಸಿದ್ದ ಕಾಲ್ತುಳಿತದಲ್ಲಿ 41 ಜನ ಮೃತಪಟ್ಟಿದ್ದರು.
.ಸೇಲಂ: ರ್ಯಾಲಿಗೆ ಅನುಮತಿ ಕೋರಿದ ಟಿವಿಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.