ಕಾರವಾರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಹೀಯಾಳಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಹಾಗೂ ಎಸ್ಸಿ ಮೋರ್ಚಾದ ಜಿಲ್ಲಾ ಘಟಕದಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು.

ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ಅವರ ಬಳಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿ ಘೋಷಣೆಗಳನ್ನು ಕೂಗಲಾಯಿತು. ಪ್ರಧಾನಿ ವಿರುದ್ಧ ಅಸಾಂವಿಧಾನಿಕ ಪದಗಳನ್ನು ಬಳಸಿ ಟೀಕಿಸಿದ ಖರ್ಗೆ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಚುನಾವಣಾ ಶಾಖೆಯ ತಹಶೀಲ್ದಾರ್ ಪ್ರಮೋದ ನಾಯ್ಕ ಅವರಿಗೆ ಮನವಿ ಸಲ್ಲಿಸಲಾಯಿತು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಎಸ್.ಹೆಗಡೆ ಮಾತನಾಡಿ, ‘ಭ್ರಷ್ಟಾಚಾರವನ್ನೇ ಮೈಗೂಡಿಸಿಕೊಂಡ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮೋದಿ ಟೀಕಿಸುವ ನೈತಿಕತೆ ಉಳಿಸಿಕೊಂಡಿಲ್ಲ. ರಾಷ್ಟ್ರಕ್ಕಾಗಿ ಜೀವನ ಮುಡಿಪಿಟ್ಟಿರುವ ವ್ಯಕ್ತಿಯ ವಿರುದ್ಧ ಅಸಂವಿಧಾನಿಕವಾಗಿ ಟೀಕಿಸಿರುವ ಅವರು ಕೂಡಲೆ ಕ್ಷಮೆ ಕೇಳಬೇಕು. ಚುನಾವಣಾ ಆಯೋಗ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.

ಒಬಿಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರ ನಾಯ್ಕ, ‘ಇಂಡಿ ಒಕ್ಕೂಟದ ನಾಯಕರನ್ನು ಮೆಚ್ಚಿಸಲು ಖರ್ಗೆ ಮೋದಿ ವಿರುದ್ಧ ಹೇಳಿಕೆ ನೀಡಿದ್ದಾರೆ. ಕಪ್ಪು ಚುಕ್ಕೆ ಇಲ್ಲದೆ ಅಧಿಕಾರ ನಡೆಸಿರುವ ಮೋದಿ ಅವರಂತಹ ನಾಯಕರನ್ನು ಟೀಕಿಸುವ ಮುನ್ನ ಹತ್ತಾರು ಬಾರಿ ಯೋಚಿಸಬೇಕು’ ಎಂದರು.

ಎಸ್ಸಿ ಮೋರ್ಚಾ ಅಧ್ಯಕ್ಷ ನಂದನ ಬೋರಕರ್, ‘ದೇಶಪ್ರೇಮಿಗಳನ್ನು ಟೀಕಿಸುವ, ದೇಶಕ್ಕಾಗಿ ಕೆಲಸ ಮಾಡುವವರನ್ನು ತುಚ್ಛವಾಗಿ ಜರಿಯುವ ಗುಣವನ್ನು ಕಾಂಗ್ರೆಸ್ ನಾಯಕರು ಮೈಗೂಡಿಸಿಕೊಂಡಿದ್ದಾರೆ’ ಎಂದು ಆರೋಪಿಸಿದರು. ಗಜಾನನ ಗುನಗಾ, ದೀಪಾ ಹರಿಕಂತ್ರ, ನಾಗೇಶ ಕುರ್ಡೇಕರ, ಸುಭಾಷ ಗುನಗಿ, ದೇವಿದಾಸ ನಾಯ್ಕ, ಸಂದೇಶ ಶೆಟ್ಟಿ, ದಿವ್ಯಾ ನಾಯ್ಕ, ಶಿಲ್ಪಾ ನಾಯ್ಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-20-99388890

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.