ನವದೆಹಲಿ: ‘ನಿಮ್ಮ ಆಡಳಿತದಲ್ಲಿ ಕಾಶ್ಮೀರದ ಜನರು ಸುರಕ್ಷಿತವಾಗಿಲ್ಲ’ ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರದ ವಿರುದ್ಧ ರಾಜ್ಯಸಭೆಯಲ್ಲಿ ಗುರುವಾರ ಆರೋಪಿಸಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್ನ ಮುಖಂಡ ಫಾರೂಕ್ ಅಬ್ದುಲ್ಲಾ ಅವರ ಮೇಲೆ ನಡೆದ ದಾಳಿಯನ್ನು ಪ್ರಸ್ತಾಪಿಸಿದ ಅವರು, ‘ಇದೊಂದು ಅತ್ಯಂತ ಗಂಭೀರವಾದ ವಿಷಯ. ಜಮ್ಮು ಮತ್ತು ಕಾಶ್ಮೀರದ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಮತ್ತು ಫಾರೂಕ್ ಅವರ ಮೇಲೆ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಲು ಯತ್ನಿಸಿದ್ದನ್ನು ಗಮನಿಸಿದರೆ, ಕಾಶ್ಮೀರದಲ್ಲಿ ಯಾರಿಗೂ ಭದ್ರತೆ ಎಂಬುದೇ ಇಲ್ಲವಾದಂತಾಗಿದೆ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಜೆ.ಪಿ. ನಡ್ಡಾ, ‘ಈ ವಿಷಯವನ್ನು ಕಾಂಗ್ರೆಸ್ ರಾಜಕೀಯಗೊಳಿಸಬಾರದು’ ಎಂದಿದ್ದಾರೆ.
.ಜಮ್ಮು: ಫಾರೂಕ್ ಅಬ್ದುಲ್ಲಾ, ಡಿಸಿಎಂ ಚೌಧರಿ ಹತ್ಯೆ ಯತ್ನ.ಸ್ಪೀಕರ್ ಓಂ ಬಿರ್ಲಾ ಪದಚ್ಯುತಿಗೆ ಮಂಡಿಸಿದ್ದ ನಿರ್ಣಯ: ಅವಿಶ್ವಾಸಕ್ಕೆ ಸೋಲು .
ಮದುವೆ ಸಮಾರಂಭಕ್ಕೆ ತೆರಳಿದ್ದ ವೇಳೆ, ನ್ಯಾಷನಲ್ ಕಾನ್ಫರೆನ್ಸ್(ಎನ್ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹಾಗೂ ಜಮ್ಮು–ಕಾಶ್ಮೀರದ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಅವರ ಮೇಲೆ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಲು ಯತ್ನಿಸಿದ ಘಟನೆ ಬುಧವಾರ ರಾತ್ರಿ ನಡೆದಿದೆ.

ಘಟನೆಗೆ ಸಂಬಂಧಿಸಿ ಆರೋಪಿ,70 ವರ್ಷದ ಕಮಲ್ ಸಿಂಗ್ ಜಮ್ವಾಲ್ ಅವರನ್ನು ಬಂಧಿಸಲಾಗಿದೆ. ಆರೋಪಿಯು ಪುರಾನಿ ಮಂಡಿ ನಿವಾಸಿ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.