ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ (ಜೆಇಎಂ) ಸಂಘಟನೆಗೆ ಸೇರಿದ ಉಗ್ರರನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಹತ್ಯೆಗೈದಿವೆ.

ಈ ಪ್ರದೇಶದಿಂದ ಎರಡು ಎಕೆ-27 ರೈಫಲ್, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನೆ ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಗುಪ್ತಚರ ದಳದ ಖಚಿತ ಮಾಹಿತಿ ಮೇರೆಗೆ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಲಾಗಿತ್ತು. ಸುತ್ತುಮುತ್ತಲಿನ ಪ್ರದೇಶದಲ್ಲಿ ಕಾರ್ಯಾಚರಣೆ ಈಗಲೂ ಮುಂದುವರಿದಿದೆ.

ಈ ವರ್ಷ ಜಮ್ಮು ಪ್ರದೇಶದಲ್ಲಿ ನಡೆಡ ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಆರು ಜೆಇಎಂ ಭಯೋತ್ಪಾದಕರನ್ನು ಹತ್ಯೆಗೈಯಲಾಗಿದೆ. ಈ ಮೊದಲು ಉಧಂಪುರದಲ್ಲಿ ಇಬ್ಬರು ಹಾಗೂ ಕಥುವಾದಲ್ಲಿ ಒಬ್ಬ ಉಗ್ರನನ್ನು ಹತ್ಯೆಗೈಯಲಾಗಿತ್ತು.
.ಆಳ ಅಗಲ | ಭಯೋತ್ಪಾದನೆಯ 'ಹೊಸ' ಮುಖ: 'ವೈಟ್ ಕಾಲರ್' ಉಗ್ರರು.ಮಹಿಳೆಯನ್ನು ಹಗ್ಗದಲ್ಲಿ ಕಟ್ಟಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಎಸೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.